ಆಯ್ದ ಶಾಲೆಗಳಲ್ಲಿ ಈ ವರ್ಷದಿಂದಲೇ ಹೊಸ ಶಿಕ್ಷಣ ನೀತಿ ಆರಂಭಆಯ್ದ ಶಾಲೆಗಳಲ್ಲಿ ಈ ವರ್ಷದಿಂದಲೇ ಹೊಸ ಶಿಕ್ಷಣ ನೀತಿ ಆರಂಭ

0

ಅತಿಥಿ ಶಿಕ್ಷಕರ ವೇತನ ಪಾವತಿ ಎರಡ್ಮೂರು ತಿಂಗಳಷ್ಟೆ ತಡವಾಗಿರಬಹುದು

ಸುಬ್ರಹ್ಮಣ್ಯದಲ್ಲಿ ಸಚಿವ ಬಿ.ಸಿ.ನಾಗೇಶ್

ಹೊಸ ಶಿಕ್ಷಣ ನೀತಿಯನ್ನು ಈ ವರ್ಷದಿಂದಲೇ ಪ್ರಾರಂಭಿಸುತ್ತಿದ್ದೇವೆ. ಆದರೆ ಆಯ್ದ ಶಾಲೆಗಳಲ್ಲಿ ಮಾತ್ರ. ಮುಂದಿನ ವರ್ಷದಿಂದ ಪೂರ್ಣವಾಗಿ ಆರಂಭಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.


ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜ.18 ರಂದು ಪತ್ರಕರ್ತರೊಂದಿಗೆ ಮಾತನಾಡಿದರು. ಈ ವರ್ಷ 400-500 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಆರಂಭವಾಗಲಿದೆ ಎಂದರು.
ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳು ಈ ಹಿಂದಿನಂತೆಯೇ ನಡೆಯಲಿದೆ. ಈಗಾಗಲೇ ದಿನಾಂಕ ಘೋಷಿಸಲಾಗಿದೆ. ಪರೀಕ್ಷಾ ಪೂರ್ವ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದರು.


ಮಕರ ಸಂಕ್ರಾಂತಿ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ14ರ ಬದಲು 15ಕ್ಕೆ ರಜೆ ನೀಡಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು. ವರ್ಷದಲ್ಲಿ ಐದು ರಜೆಗಳನ್ನು ನೀಡುವ ಅವಕಾಶ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅದರಂತೆ ಅವರು ರಜೆ ನೀಡುತ್ತಾರೆ‌. ರಜೆ ನೀಡುವಲ್ಲಿಯೂ ಕೆಲವೊಂದು ಬದಲಾವಣೆ ಮಾಡಲಾಗಿದೆ ಎಂದರು.
ಅತಿಥಿ ಶಿಕ್ಷಕರಿಗೆ ವೇತನ ಪಾವತಿ ಆಗದೇ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಎರಡ್ಮೂರು ತಿಂಗಳಷ್ಟೆ ತಡ ಆಗಬಹುದು ಅಥವಾ ಆರಂಭದಲ್ಲಿ ತಡ ಆಗಬಹುದು ಹೊರತು ವೇತನ ಪಾವತಿ ಆಗದೇ ಇರುವುದಿಲ್ಲ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸಚಿವ ಎಸ್.ಅಂಗಾರ ಜತೆಗಿದ್ದರು.