ಜ.30 : ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಉತ್ಸವ

0

ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.30 ರಂದು ನಡೆಯಲಿದೆ.
ಬೆಳಿಗ್ಗೆ ದೇವತಾ ಪ್ರಾರ್ಥನೆ,ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಲಿದೆ.
ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ಬೆಳಿಗ್ಗೆ ಗಂಟೆ 10.00 ರಿಂದ ವಿಷ್ಣುಪ್ರಿಯ ಮಹಿಳಾ ಭಜನಾ ಮಂಡಳಿ ಬೆಳಂದೂರು ವಲಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ ಗಂಟೆ 6.30 ಕ್ಕೆ ರಂಗಪೂಜೆ,ಮಹೋತ್ಸವ,ದರ್ಶನ ಬಲಿ,ಬಟ್ಟಲು ಕಾಣಿಕೆ,ಮಂತ್ರಾಕ್ಷತೆ ನಡೆಯಲಿದೆ ನಂತರ ಗುಳಿಗ,ಪಂಜುರ್ಲಿ ,ಶಿರಾಡಿ ದೈವಗಳ ನೇಮೋತ್ಸವ ನಡೆಯಲಿದೆ.