ಸುಳ್ಯ ಸರಕಾರಿ ಶಾಲೆಯಲ್ಲಿ ಮಕ್ಕಳ ಕಲಿಕಾ ಹಬ್ಬ

0

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಸುಳ್ಯ ಇದರ ಸಹಭಾಗಿತ್ವದಲ್ಲಿ ಮಕ್ಕಳ ಕಲಿಕಾ ಹಬ್ಬವು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಸುಳ್ಯ ನಗರಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಸದಸ್ಯರಾದ ಕಿಶೋರಿ ಶೇಟ್,ಧೀರಾಕ್ರಾಸ್ತಾ,, ಸರಕಾರಿ ಪದವಿಪೂರ್ವ ಕಾಲೇಜಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ, ಶಾಲೆಯ ಮುಖ್ಯ ಶಿಕ್ಷಕಿ ಸೀತಾ ರವರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸರಕಾರಿ ಪದವಿಪೂರ್ವ ಕಾಲೇಜಿನ ಸಹಶಿಕ್ಷಕಿ ಚಂದ್ರಮತಿ, ವೃತ್ತಿ ಶಿಕ್ಷಣ ಶಿಕ್ಷಕಿ ಚಂದ್ರಾವತಿ,ಕೆ.ಪಿ.ಎಸ್ ಗಾಂಧಿನಗರದ ಶಿಕ್ಷಕಿ ಹೇಮಾವತಿ‌ ಬಿ.ಶಾಂತಿನಗರ, ಶಿಕ್ಷಕಿ ಪವಿತ್ರ ಕೊಯಿಕುಳಿ, ಮುಖ್ಯ ಶಿಕ್ಷಕ ಮಾಧವ ಕೊಯಿಕುಳಿ ಉಪಸ್ಥಿತರಿದ್ದರು. ಸರಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ ರವರು ಮಕ್ಕಳ ಕಲಿಕಾ ಹಬ್ಬದ ನೋಡೆಲ್ ಅಧಿಕಾರಿಯಾಗಿ ಸಲಹೆ ಮಾರ್ಗದರ್ಶನ ನೀಡಿದರು.
ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ಚಂದ್ರಮತಿ ವಂದಿಸಿದರು. ಮುಖ್ಯ
ಶಿಕ್ಷಕ ಮಾಧವ ಕೊಯಿಕುಳಿ ಯವರು ಕಾರ್ಯಕ್ರಮ ನಿರೂಪಿಸಿದರು.