ಬೆಳ್ಳಾರೆಯಲ್ಲಿ ತಹಶೀಲ್ದಾರರ ಉಪಸ್ಥಿತಿಯಲ್ಲಿ ವಿವಿಧ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ

0

ತಾಲೂಕು ಆಡಳಿತ ಸುಳ್ಯ , ತಾಲೂಕು ತಹಶೀಲ್ದಾರರೊಂದಿಗೆ ತಾಲೂಕಿನ ವಿವಿಧ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ನ.21 ರಂದು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನದಲ್ಲಿ ನಡೆಯಿತು.
ತಹಶೀಲ್ದಾರ್ ಅನಿತಾಲಕ್ಷ್ಮೀ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮ ವಾಸ್ತವ್ಯದ ಉದ್ದೇಶ,ಮತ್ತು ಸರಕಾರದ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.


ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಇಲಾಖಾಧಿಕಾರಿಗಳು ತಮ್ಮ ಇಲಾಕಜೆಯ ಮಾಹಿತಿ ನೀಡಿದರು‌
ವೇದಿಕೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ನಂದಕುಮಾರ್, ಸಿ.ಡಿ.ಪಿ.ಒ ಶ್ರೀಮತಿ ರಶ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ವೀಣಾ ಎಂ.ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು, ಸಮಾಜ ಕಲ್ಯಾಣಾಧಿಕಾರಿ ರವಿಕುಮಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ
ಸುಂದರಯ್ಯ, ತೋಟಗಾರಿಕಾ ಅಧಿಕಾರಿ ಶ್ರೀಮತಿ ಸುಹಾನ,ಗ್ರಾಮ ಪಂಚಾಯತ್ ಸದಸ್ಯರಾದ ವಿಠಲದಾಸ್ ಎನ್.ಎಸ್.ಡಿ, ದಿನೇಶ್ಚಂದೃ ಹೆಗ್ಡೆ, ಶ್ರೀಮತಿ ಜಯಶ್ರೀ, ಶ್ರೀಮತಿ ವೀಣಾ,ಶ್ರೀಮತಿ ಭವ್ಯ ಉಪಸ್ಥಿತರಿದ್ದರು.


ಉಪತಹಶೀಲ್ದಾರ್ ಚಂದ್ರಕಾಂತ್ ಸ್ವಾಗತಿಸಿ,ವಿದ್ಯಾರ್ಥಿಗಳು ಪ್ರಾರ್ಥಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.