ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಲ್ಯಾಪ್ ಟಾಪ್ ಕೊಡುಗೆ

0

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಲ್ಯಾಪ್ ಟಾಪ್ ಕೊಡುಗೆಯಾಗಿ ನೀಡಲಾಯಿತು.
ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರರವರು ಜ.21 ರಂದು ಬೆಳ್ಳಾರೆ ಕೆ.ಪಿ.ಎಸ್.ನಲ್ಲಿ ನಡೆದ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾರವರಿಗೆ ಲ್ಯಾಪ್ ಟಾಪ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್,ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ,ಉಪಾಧ್ಯಕ್ಷೆ ಗೌರಿ ನೆಟ್ಟಾರು ಮತ್ತು ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.