ಕುಂಬಳಚೇರಿ : ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವದ ಆಮಂತ್ರಣ ಬಿಡುಗಡೆ

0

*ಪೆರಾಜೆ ಗ್ರಾಮದ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮಾ.3 ರಿಂದ 5 ರವೆರೆಗೆ ನಡೆಯಲಿರುವ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವದ ಆಮಂತ್ರಣ ಬಿಡುಗಡೆಯು ಇಂದು ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಪೆರಾಜೆ ದೇವಾಲಯದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ ಆಮಂತ್ರಣ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ದೈವಕಟ್ಟು ಮಹೋತ್ಸವ ಸಮಿತಿಯ ಅಧ್ಯಕ್ಷ ಹೊನ್ನಪ್ಪ ಕೊಳಂಗಾಯ, ಪ್ರಧಾನ ಕಾರ್ಯದರ್ಶಿ ಪವಿತ್ರನ್ ಗುಂಡ್ಯ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಕುಂಬಳಚೇರಿ, ಆಡಳಿತ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಕಾರ್ಯಾಧ್ಯಕ್ಷರುಗಳಾದ ನಂಜಪ್ಪ ನಿಡ್ಯಮಲೆ, ಶ್ರೀಜಿತ್ ಅರಂತೋಡು, ವಿವಿಧ ಸಮಿತಿಯ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹೊನ್ನಪ್ಪ ಕೊಳಂಗಾಯ ಸ್ವಾಗತಿಸಿ, ನಾಗೇಶ್ ಕುಂದಲ್ಪಾಡಿ ಪ್ರಾಸ್ತಾವಿಕ ಮಾತನಾಡಿದರು. ಪವಿತ್ರನ್ ಗುಂಡ್ಯ ವಂದಿಸಿದರು.