ಗುತ್ತಿಗಾರು ಸ.ಪ.ಪೂ.ಕಾಲೇಜಿನಲ್ಲಿ ಕಲಿಕಾ ಹಬ್ಬ

0

ಸ.ಪ.ಪೂ.ಕಾಲೇಜು, ಗುತ್ತಿಗಾರಿನಲ್ಲಿ ಗುತ್ತಿಗಾರು ಕ್ಲಸ್ಟರ್ ಮಟ್ಟದ 2 ದಿನದ ಕಲಿಕಾ ಹಬ್ಬ ಕಾರ್ಯಕ್ರಮ ಇಂದು ಪ್ರಾರಂಭವಾಯಿತು. ಗ್ರಾ. ಪಂ. ಸದಸ್ಯರಾದ ಮಾಯಿಲಪ್ಪ ಕೊಂಬೊಟ್ಟು ವಿಜ್ಞಾನ ಪ್ರಯೋಗದ ಮೂಲಕ ಉದ್ಘಾಟಿಸಿ ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು.

ತಾಲೂಕು ಶಿಕ್ಷಣ ಸಂಯೋಜಕರಾದ ಶ್ರೀಮತಿ ನಳಿನಿ, ಸಮೂಹ ಸಂಪನ್ಮೂಲ ವ್ಯಕ್ತಿ ಸಂತೋಷ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ನೆಲ್ಸನ್ ಕ್ಯಾಸ್ಟಲಿನೊ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಗೋಪಾಲ್ ಏನೆಕಲ್ ಧನ್ಯವಾದ ಸಮರ್ಪಿಸಿದರು.

ಗುತ್ತಿಗಾರು ಕ್ಲಸ್ಟರ್ ಇದರ ವಿವಿದ ಶಾಲೆಗಳಿಂದ ಆಗಮಿಸಿದ 120 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ.