ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ, ಹೆಣ್ಣು ಮಕ್ಕಳ ಜಾಗೃತಿ ಕುರಿತು ಪದ್ಯ ಹಾಡಿ ಕೊಡುವ ಮೂಲಕ ವಿದ್ಯಾರ್ಥಿಗಳ ಗಮನ ಸೆಳೆದ ನ್ಯಾಯಾಧೀಶರು

0

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಆಡಳಿತ ಸುಳ್ಯ, ವಕೀಲರ ಸಂಘ ಸುಳ್ಯ, ಸರ್ಕಾರಿ ಪದವಿ ಪೂರ್ವ ಕಾಲೇಜು, ಸುದ್ದಿ ಸಮೂಹ ಮಾಧ್ಯಮ ಇದರ ಸಂಯುಕ್ತಾಶ್ರಯದಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಪುತ್ತೂರು ಸಿವಿಲ್ ನ್ಯಾಯಾಧೀಶರು ಸುಳ್ಯ ನ್ಯಾಯಾಲಯದ ಕಿರಿಯ ನ್ಯಾಯಾಲಯದ ನ್ಯಾಯಾಧೀಶರಾಗಿರುವ ಶಿವಣ್ಣ ಎಚ್ ಆರ್ ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಈ ರೀತಿಯ ಕಾರ್ಯಕ್ರಮಗಳ ಸದ್ಬಳಕೆಯನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕೆಂದು ಕರೆ ನೀಡಿದರು.
ಅಲ್ಲದೆ ಹೆಣ್ಣುಮಕ್ಕಳ ಜಾಗೃತಿ ವಿಷಯದ ಕುರಿತು ಇರುವ ಪದ್ಯದ ಸಾಲುಗಳನ್ನು ತಾವೇ ಹಾಡಿಕೊಡುವ ಮೂಲಕ ವಿದ್ಯಾರ್ಥಿಗಳ ಗಮನವನ್ನು ಸೆಳೆದರು. ನ್ಯಾಯಾಧೀಶರು ಹೇಳಿಕೊಡುವ ಅದೇ ರಾಗದಲ್ಲಿ ವಿದ್ಯಾರ್ಥಿಗಳು ಕೂಡ ಪದ್ಯವನ್ನು ಹಾಡುವ ಮೂಲಕ ನ್ಯಾಯಾಧೀಶರಿಗೆ ಸಾತ್ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ರಾಜೇಶ್ವರಿ ಕಾಡು ತೋಟ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸುಳ್ಯ ನ್ಯಾಯಾಲಯದ ಪ್ಯಾನೆಲ್ ವಕೀಲ ಸಂದೀಪ್ ಎನ್ ಸಂವಿಧಾನದಲ್ಲಿ ಹೆಣ್ಣು ಮಕ್ಕಳ ರಕ್ಷಣೆಯ ಕುರಿತು ಇರುವ ಕಾಯ್ದೆಗಳ ಬಗ್ಗೆ ಕೆಲವು ಮಾಹಿತಿಯನ್ನು ನೀಡಿದರು.
ಗೌರವ ಉಪಸ್ಥಿತರಾಗಿ ಭಾಗವಹಿಸಿದ್ದ ಸುಳ್ಯ ತಹಶೀಲ್ದಾರ್ ಕು.ಅನಿತಾ ಲಕ್ಷ್ಮಿ ಈ ಸಂದರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬ ಮಕ್ಕಳಿಗೂ ವಿದ್ಯಾಭ್ಯಾಸ ಸರ್ವ ಶ್ರೇಷ್ಠವಾದ ಹಕ್ಕುಗಳಲ್ಲಿ ಒಂದಾಗಿದೆ. ವಿದ್ಯಾಭ್ಯಾಸದ ಬಳಿಕ ಕೆಲಸಗಳು ಅಥವಾ ಹುದ್ದೆಗಳು ನಂತರದ ಸಂಗತಿಯಾಗಿದೆ. ಆದರೆ ಪ್ರತಿಯೊಬ್ಬ ಮಕ್ಕಳಲ್ಲಿ ವಿದ್ಯಾಭ್ಯಾಸವಿದ್ದರೆ ತಮ್ಮ ರಕ್ಷಣೆ ಇದರಿಂದ ಸಾಧ್ಯವಿದೆ ಎಂದು ಹೇಳಿದರು.


ವೇದಿಕೆಯಲ್ಲಿ ಸುಳ್ಯ ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ, ಸಹಾಯಕ ಸರ್ಕಾರಿ ಅಭಿಯೋಜಕ ಆರೋಣ್ ಡಿ’ಸೋಜ, ಸುಳ್ಯ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ, ಶಾಲಾ ಉಪಪ್ರಾಂಶುಪಾಲ ಪ್ರಕಾಶ್ ಮುಡಿತ್ತಾಯ, ಪ್ಯಾನಲ್ ವಕೀಲರಾದ ಕು.ಲೋಲಾಕ್ಷಿ , ಶ್ರೀಮತಿ ಉಷಾ ಉಪಸ್ಥಿತರಿದ್ದರು.
ಪ್ರಕಾಶ್ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿ ವಕೀಲರಾದ ಉಷಾ ಸ್ವಾಗತಿಸಿ, ಲೋಲಾಕ್ಷಿ ವಂದಿಸಿದರು.
ಕಾರ್ಯಕ್ರಮದಲ್ಲಿ ಸುಳ್ಯ ವಕೀಲರ ಸಂಘದ ಕೋಶಾಧಿಕಾರಿ ಜಗದೀಶ್, ಹಿರಿಯ ವಕೀಲರಾದ ಜಗದೀಶ್ ಹುದೇರಿ, ನ್ಯಾಯಾಲಯದ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಭಾಗವಹಿಸಿದ್ದರು.