ಅಖಿಲ ಭಾರತ ಬ್ಯಾರಿ ಪರಿಷತ್ ಉಪಾಧ್ಯಕ್ಷರಾಗಿ ಟಿ. ಎಂ.ಶಾಹಿದ್ ತೆಕ್ಕಿಲ್ ಆಯ್ಕೆ

0

ಹಿರಿಯ ರಾಜಕೀಯ,ಸಾಮಾಜಿಕ ಧುರೀಣ ಬೆಳ್ತಂಗಡಿ ವಿಧಾನ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿಯಾಗಿರುವ ಟಿ. ಎಂ ಶಾಹಿದ್ ತೆಕ್ಕಿಲ್ ರವರನ್ನು ಇಂದು ಮಂಗಳೂರಿನಲ್ಲಿ ಅಖಿಲ ಭಾರತ ಬ್ಯಾರಿ ಪರಿಷತ್ತಿನ ಅಧ್ಯಕ್ಷರಾದ ಅಹಮದ್ ಬಾವ ಬಜಾಲ್ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ರಾಜ್ಯ ಎಸ್ ಯು ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ಹಾವೇರಿ ಜಿಲ್ಲೆಯ ಹಿರೆಕೆರೂರು ಮತ್ತು ಕೊಡಗು ಜೆಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ.ಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2001ರಲ್ಲಿ ರಾಜ್ಯ ಯುವ ಪ್ರಶಸ್ತಿಗೆ ಪಡೆದ ಇವರು ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದಲ್ಲಿ ಮೂರು ಬಾರಿ ಅಧ್ಯಕ್ಷರಾಗಿ,
ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರುಮಂಡಳಿ ಸದ್ಯರಾಗಿ, ಪ್ರಸ್ತುತ ಕೆಪಿಸಿಸಿ ಬೆಂಗಳೂರು ಇದರ ಮಾಧ್ಯಮ ವಕ್ತಾರರಾಗಿ, ರಾಜೀವ್ ಯೂತ್ ಫೌಂಡೇಶನ್ ರಾಜ್ಯ ಅಧ್ಯಕ್ಷರಾಗಿ, ಆರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ,ಸಂಪಾಜೆ ಗೂನಡ್ಕ ತೆಕ್ಕಿಲ್ ಶಿಕ್ಷಣ ಸಂಸ್ಥೆಗಳ ಸ್ಥಾಪಕಧ್ಯಕ್ಷರಾಗಿ, ಬೆಂಗಳೂರಿನ ಮುಸ್ಲಿಂ ಯುವಜನ ಪರಿಷತ್ತಿನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಆರಂತೋಡು ಬದ್ರಿಯಾ ಮಸೀದಿ, ಸಂಪಾಜೆ ಗೂನಡ್ಕ ಪೇರಡ್ಕ ಮೋಹಿದ್ದಿನ್ ಜುಮಾ ಮಸೀದಿಯ ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಹಲವಾರು ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ರೀಡಾ, ಸಹಕಾರ, ಕೃಷಿ, ಉದ್ಯಮ ಕ್ಷೇತ್ರದಲ್ಲಿ ದುಡಿಯುತ್ತಿದ್ದಾರೆ. ಇವರು ತೆಕ್ಕಿಲ್ ಮನೆತನದವರು.