ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳಾಗಿ ಸುಳ್ಯ ತಾಲೂಕಿನ ಮೂವರ ನೇಮಕ

0

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳಾಗಿ ಜಿಲ್ಲಾ ಉಪಾಧ್ಯಕ್ಷರಾಗಿ ಸುಳ್ಯದ ಎಚ್.ಎ.ಉಮ್ಮರ್ ಹಾಜಿ ಜಯನಗರ, ಎ.ಕೆ.ಇಬ್ರಾಹಿಂ ಸಂಪಾಜೆ ಹಾಗೂ ಜಿಲ್ಲಾ ಸಂಯೋಜಕರಾಗಿ ಬಶೀರ್ ಅಹ್ಮದ್ ಎನ್ ನೇಲ್ಯಮಜಲು ಇವರನ್ನು ನೇಮಕಗೊಳಿಸಲಾಗಿದೆ.

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್ ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಇವರುಗಳಿಗೆ ಆದೇಶ ಪತ್ರವನ್ನು ಹಸ್ತಾಂತರಿಸಿದರು.ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಉಸ್ತುವಾರಿ ಶಬ್ಬೀರ್ ಸಿದ್ದಕಟ್ಟೆ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಪ್ರಕಾಶ್ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕೋಶಾಧಿಕಾರಿ ತಾಜ್ ಮಹಮ್ಮದ್ ಸಂಪಾಜೆ ಉಪಸ್ಥಿತರಿದ್ದರು.

ಮಾಜಿ ಸಚಿವರುಗಳಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್,ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ.ಜಯರಾಮ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಎಸ್.ಸಂಶುದ್ದೀನ್,ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಇಸ್ಮಾಯಿಲ್ ಪಡ್ಪಿನಂಗಡಿ,ಇವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here