ಕನಕಮಜಲು ಗ್ರಾ.ಪಂ. ಸಾಮಾನ್ಯ ಸಭೆ

0

ಕನಕಮಜಲು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯು ಗ್ರಾ ಪಂ ಅಧ್ಯಕ್ಷ ಶ್ರೀಧರ ಕುತ್ಯಾಳ ಅವರ ಅಧ್ಯಕ್ಷತೆಯಲ್ಲಿ ಗ್ರಾ. ಪಂ. ಸಭಾಭವನದಲ್ಲಿ ಜ.25ರಂದು ಜರುಗಿತು.

ಈ ಸಭೆಯಲ್ಲಿ ಶಾಸನಬದ್ದ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆ ತಯಾರಿಸಲಾಯಿತು. 2021-22 ನೇ ಸಾಲಿನ ಡಾ| ಬಿ.ಆರ್ ಅಂಭೇಡ್ಕರ್ ವಸತಿ ಯೋಜನೆ ಹಾಗು ಬಸವ ವಸತಿ ಯೋಜನೆಯ ಮನೆಗಳ ಪ್ರಗತಿ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್, ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ಶ್ರೀಮತಿ ಶಾರದಾ ಉಗ್ಗಮೂಲೆ, ಇಬ್ರಾಹಿಂ ಕಾಸಿಂ ಕನಕಮಜಲು, ಶ್ರೀಮತಿ ಸುಮಿತ್ರ ಕುತ್ಯಾಳ ಉಪಸ್ಥಿತರಿದ್ದರು. ಪಂ.ಅ.ಅಧಿಕಾರಿ ಶ್ರೀಮತಿ ಸರೋಜಿನಿ ಅವರು ಸ್ವಾಗತಿಸಿ, ಕಾರ್ಯದರ್ಶಿ ರಮೇಶ್ ಅವರು ವಂದಿಸಿದರು. ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು.