ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಅಸಾಧಾರಣ ಕಾರ್ಯನಿರ್ವಹಣೆಯ ಆಸ್ಪತ್ರೆ ಪುರಸ್ಕಾರ

0

74ನೇ ಗಣರಾಜ್ಯೋತ್ಸವದ ಪ್ರಯುಕ್ತ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೋಗ್ಯ ಸೇವೆಯನ್ನು ಸಲ್ಲಿಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಒಂದಾದ ಕೆವಿಜಿ ವೈದ್ಯಕೀಯ ಆಸ್ಪತ್ರೆಯನ್ನು ಅಸಾಧಾರಣ ಕಾರ್ಯನಿರ್ವಹಣೆಯ ಆಸ್ಪತ್ರೆ ಎಂದು ಜಿಲ್ಲಾಡಳಿತ ಗುರುತಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಅಕ್ಷಯ ಕೆ. ಸಿ. ಹಾಗೂ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಹಾಜರಿದ್ದು ದ.ಕ. ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ರಿಂದ ಗೌರವವನ್ನು ಸ್ವೀಕರಿಸಿದರು.