ಪಂಬೆತ್ತಾಡಿ ಶಾಲೆಯಲ್ಲಿ ಗಣರಾಜ್ಯ ದಿನಾಚರಣೆ

0

ಪಂಬೆತ್ತಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಜ. 26ರಂದು ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರು ಧ್ವಜಾರೋಹಣ ಮಾಡಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತ್ಯಶಂಕರ ಕಲ್ಚಾರುರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸಹ ಶಿಕ್ಷಕಿ ಶ್ರೀಮತಿ ಭಾರ್ಗವಿ.ಜಿ.ಎಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ಕಾರ್ಯಕ್ರಮ ನಡೆಯಿತು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು , ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಮತಿ ಭವ್ಯ. ಬಿ ಸ್ವಾಗತಿಸಿದರು. ಕು. ಶರಣ್ಯ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಲತಾ ಧನ್ಯವಾದವಿತ್ತರು.