ಕೆವಿಜಿ ಐಪಿಎಸ್ ನಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ

0

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ವಿ ಧ್ವಜರೋಹನ ಕಾರ್ಯಕ್ರಮವನ್ನು ನೆರವೇರಿಸಿ ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಬಗ್ಗೆ ತಿಳಿಸಿ, ದೇಶದ ಮಹೊನ್ನತಿಗೆ ವಿದ್ಯಾರ್ಥಿಗಳು ಹೇಗೆ ಜವಾಬ್ದಾರಿಯುತವಾಗಿ ಶ್ರಮಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತನ್ನು ನುಡಿದರು. ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅನೀಶ್ ಮತ್ತು ಸೋನಾ ನಾರ್ಕೋಡು ನಿರೂಪಿಸಿದರು. ಕೆವಿಜಿ ಐಟಿಐ ನ ಪ್ರಾಂಶುಪಾಲ ಚಿದಾನಂದ ಬಾಳಿಲ ಸ್ವಾಗತ ಭಾಷಣವನ್ನು ಮಾಡಿದರು. ಆರನೇ ತರಗತಿಯ ವಿದ್ಯಾರ್ಥಿನಿ ಹನಿಯ ಸಂವಿಧಾನ ರಚನೆಯ ಮಹತ್ವದ ಬಗ್ಗೆ ತಿಳಿಸಿದಳು. ಬಳಿಕ ಕೆವಿಜಿ ಐಪಿಎಸ್ ನ ವಿದ್ಯಾರ್ಥಿಗಳು ವಿವಿಧ ಮನೋರಂಜನಾತ್ಮಕ ಕಾರ್ಯಕ್ರಮಗಳನ್ನು ನೀಡಿದರು . ಈ ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲರಿಗೂ ಉಪ ಪ್ರಾಂಶುಪಾಲೆ ಶಿಲ್ಪಾ ಬಿದ್ದಪ್ಪ ಧನ್ಯವಾದವನ್ನು ಸಲ್ಲಿಸಿದರು.ಈ ಕಾರ್ಯಕ್ರಮದಲ್ಲಿ ಕೆವಿಜಿ ಐ.ಟಿ.ಐ ಕಾಲೇಜಿನ ಉಪ ಪ್ರಾಂಶುಪಾಲರಾದ ದಿನೇಶ್ ಮಡ್ತಿಲ , ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ.ಯಶೋಧ ರಾಮಚಂದ್ರ, ಉಪ ಪ್ರಾಂಶುಪಾಲ ದೀಪಕ್ ವೈ ಆರ್, ಕೆವಿಜಿ ಐಟಿಐ ಮತ್ತು ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಎಲ್ಲಾಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.