ಗೂನಡ್ಕ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ : 74ನೇ ಗಣರಾಜ್ಯೋತ್ಸವ

0


ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಗೂನಡ್ಕದಲ್ಲಿ “74ನೇ ಗಣರಾಜ್ಯೋತ್ಸವ ದಿನ”ವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯ ದಾಸ್ ರವರು ಧ್ವಜಾರೋಹಣವನ್ನು ನೆರವೇರಿಸಿ ಎಲ್ಲರಿಗೂ ಶುಭ ಹಾರೈಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್ ರವರು “ಗಣರಾಜ್ಯೋತ್ಸವ”ದ ವಿಶೇಷತೆ ಹಾಗೂ ಮಹತ್ವವನ್ನು ಎಲ್ಲರಿಗೂ ತಿಳಿಯಪಡಿಸಿದರು.
ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಬುಸಾಲಿ ಅವರು “ಗಣರಾಜ್ಯೋತ್ಸವ” ದಿನದ ಮಹತ್ವವನ್ನು ಎಲ್ಲರಿಗೂ ತಿಳಿಯಪಡಿಸಿ ಶುಭ ಹಾರೈಸಿದರು. ವಿದ್ಯಾರ್ಥಿನಿಯರಾದ ಹರ್ಷಿತಾ ಗೌಡ ಹಾಗೂ ಫರಾ ಖದೀಜಾ ಇಂಗ್ಲಿಷ್ ಹಾಗೂ ಹಿಂದಿ ಭಾಷಣದ ಮುಖಾಂತರ ದೇಶದ ಸಂವಿಧಾನದ ಮಹತ್ವ ಹಾಗೂ ಇತಿಹಾಸವನ್ನು ನೆರೆದವರೆಲ್ಲರಿಗೂ ತಿಳಿಸಿದರು.
ಈ ಸಂಭ್ರಮಾಚರಣೆಯಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್, ಅಧ್ಯಕ್ಷರಾದ ರುಕ್ಮಯ್ಯ ದಾಸ್, ನಿರ್ದೇಶಕಿ ಶ್ರೀಮತಿ ಲೀಲಾವತಿ ರುಕ್ಮಯ್ಯ ದಾಸ್, ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಅಬುಸಾಲಿ, ಪೋಷಕರು, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕಿ ಶ್ರೀಮತಿ ಸರೀನಾ ಫಾತಿಮಾ ಹೆಚ್‌ ಎ ನಿರೂಪಿಸಿ, ವಂದಿಸಿದರು.