ನಡುಗಲ್ಲು ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ

0

ನಡುಗಲ್ಲು ಹಿ.ಪ್ರಾ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆಯನ್ನು ಮಾಡಲಾಯಿತು.
ಶಾಲಾ ಮುಖ್ಯ ಶಿಕ್ಷಕರಾದ ಶ ಚಂದ್ರಶೇಖರ ಪಾರೆಪ್ಪಾಡಿ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿ ನುಡಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣ ನೆರವೇರಿಸಿದರು. ಶಿಕ್ಷಕರಾದ ಕುಶಾಲಪ್ಪ ತುಂಬಾತ್ತಾಜೆ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳಿಂದ ಭಾಷಣ , ದೇಶಭಕ್ತಿ ಗೀತೆ ಹಾಗೂ ವಿವಿಧ ಸಾಂಸ್ಕೃತಿಯ ಕಾರ್ಯಕ್ರಮಗಳು ಜರಗಿದವು. ಶಿಕ್ಷಕಿ ಸುಧಾರಾಣಿ ವಂದಿಸಿದರು. ಶ್ರೀಮತಿ ಮೋಕ್ಷ ಇವರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು,ಊರ ವಿದ್ಯಾ ಅಭಿಮಾನಿಗಳು ಉಪಸ್ಥಿತರಿದ್ದರು. ಕೊನೆಗೆ ಸರ್ವರಿಗೂ ಸಿಹಿ ತಿಂಡಿ ಹಂಚಲಾಯಿತು.