ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ವಿಭಾಗದಲ್ಲಿ ಗಣರಾಜ್ಯೋತ್ಸವ

0


ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗದಲ್ಲಿ ಗಣರಾಜ್ಯೋತ್ಸವವನ್ನು ಶಾಲಾ ಪದವೀಧರೆತರ ಮುಖ್ಯ ಗುರುಗಳಾದ ಶ್ರೀ ಮಾಯಿಲಪ್ಪ ಜಿ ಯವರು ಧ್ವಜಾರೋಹಣ ನೆರವೇರಿಸುವುದರ ಮೂಲಕ ಆಚರಿಸಲಾಯಿತು. ಭಾರತವು ಪ್ರಪಂಚದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಶಾಂತಿ ನೆಮ್ಮದಿ ಸಹಬಾಳ್ವೆ, ಭ್ರಾತೃತ್ವ, ಅಹಿಂಸೆ ಇವುಗಳ ಮೂಲಕ ದೇಶ ಬೆಳೆದಿದೆ. ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಅಡಿಯಲ್ಲಿ ದೇಶ ಪ್ರಗತಿಯ ಪಥದತ್ತ ಸಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶ ಸದೃಢವಾಗಿ ಮುನ್ನಡೆಯುತ್ತಿದೆ ಎಂದರು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಗಾಯನ ಮತ್ತು ದಿನದ ಮಹತ್ವದ ಬಗ್ಗೆ ಭಾಷಣಗಳು ನಡೆದವು.
ತದನಂತರ ನಡೆದ ಸಭಾ ಕಾರ್ಯಕ್ರಮವು ಡಾ ಬಿ ಆರ್ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಆರಂಭವಾಯಿತು. ಬಳಿಕ 2021-22 ಮತ್ತು 2022-23 ನೇ ಸಾಲಿನ ದತ್ತಿನಿಧಿ ಪುರಸ್ಕಾರವನ್ನು ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಅಧ್ಯಕ್ಷರು ಹಾಗೂ ಎಸ್ ಡಿ ಎಂ ಸಿ ಸದಸ್ಯರೂ ಅದ ವಸಂತ ಉಲ್ಲಾಸ್ ಇವರು ಆಗಮಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯ ಗುರುಗಳಾದ ಮಾಯಲಪ್ಪ ಜಿ ಯವರು ವಹಿಸಿದ್ದರು. ಸಭಾ ಕಾರ್ಯಕ್ರಮ ಆರಂಭದಲ್ಲಿ ಶಿಕ್ಷಕಿ ರಾಜೀವಿ ರೈ ಸರ್ವರನ್ನೂ ಸ್ವಾಗತಿಸಿದರು. ಶಿಕ್ಷಕಿ ಶಾಂತಕುಮಾರಿ ದತ್ತಿನಿದಿ ಪುರಸ್ಕತರ ವಿವರಗಳನ್ನು ಪ್ರಸ್ತುತಪಡಿಸಿದರು. ಶಿಕ್ಷಕ ರಾಜನಾಯಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳ ವಿವರಗಳನ್ನು ಓದಿದರು. ಸಹ ಶಿಕ್ಷಕಿ ಅರುಣಾಕ್ಷಿ ಕೆ ಎಲ್ ವಂದನಾರ್ಪಣೆಗೈದರು. ಶಿಕ್ಷಕ ದಿನೇಶ್ ಮಾಚಾರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಅಣಕು ಸಂಸತ್ತನ್ನ ನಡೆಸುವುದರ ಮೂಲಕ ಪ್ರಜಾಪ್ರಭುತ್ವದ ಆಶಯ ಮತ್ತು ಮಹತ್ವಗಳನ್ನು ಸಾದರಪಡಿಸಲಾಯಿತು.