ಅಲೆಕ್ಕಾಡಿ: ಗಣರಾಜ್ಯೋತ್ಸವ , ಪ್ರತಿಭಾ ದಿನೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

0

ಅಲೆಕ್ಕಾಡಿ ಮುರುಳ್ಯ ಸ.ಉ.ಹಿ. ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಮತ್ತು ಪ್ರತಿಭಾ ದಿನಾಚರಣೆ ನಡೆಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಶ್ರೀಮತಿ ಮಧು ಪಿ.ಆರ್. ಧ್ವಜಾರೋಹಣಗೈದು, ಶುಭ ಹಾರೈಸಿದರು. ವಿದ್ಯಾರ್ಥಿಗಳಿಂದ ಯೋಗಾಸನ ಮತ್ತು ನಾಲ್ಕು ವಿಧದ ಕವಾಯತ್ ನಡೆಯಿತು.
ಅಪರಾಹ್ನ ಸಭಾ ಕಾರ್ಯಕ್ರಮ, ಸನ್ಮಾನ ಕಾರ್ಯಕ್ರಮ, ಪ್ರತಿಭಾ ದಿನಾಚರಣೆ ನಡೆಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಮಧು ಯತೀಶ್ ಅಧ್ಯಕ್ಷತೆ ವಹಿಸಿದ್ದರು. ಮುರುಳ್ಯ ಪಂಚಾಯತ್ ಅಧ್ಯಕ್ಷೆ ಕು. ಜಾನಕಿ ದೀಪ ಪ್ರಜ್ವಲನೆ ಮಾಡಿ ಶುಭ ಹಾರೈಸಿದರು. ಶಾಲಾ ವಿದ್ಯಾರ್ಥಿಗಳಿಗೆ 48 ಸಾವಿರ ಸಮವಸ್ತ್ರ ನೀಡಿದ ನಿಂತಿಕಲ್ಲು ಪೋಲೋ ಪ್ಲಸ್ ಟ್ರೆಂಡಿ ಫ್ಯಾಶನ್ ಮಾಲಕ ಕೇರ್ಪಡ ಧ್ರುವ ಕುಮಾರ್ ರವರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಅವರ ಪತ್ನಿ ತಂದೆ, ತಾಯಿ, ಮಕ್ಕಳು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಕುಮಾರಸ್ವಾಮಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಸುಬ್ರಹ್ಮಣ್ಯ ಅತ್ಯಾಡಿಯವರು ದಿಕ್ಸೂಚಿ ಭಾಷಣ ಮಾಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ವನಿತಾ ಬಾಮೂಲೆ, ಸದಸ್ಯರಾದ ಕರುಣಾಕರ ಹುದೇರಿ, ಸುಂದರ ಶೇರ, ಪುಷ್ಪಲತಾ ಕುಕ್ಕಟ್ಟೆ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಸರೋಜಿನಿ, ಶಿಕ್ಷಣ ಸಂಯೋಜಕಿ ಸಂಧ್ಯಾ ಕುಮಾರಿ ಬೀ.ಎಸ್., ಎಣ್ಮೂರು ಸಿ ಆರ್ ಪಿ ಜಯಂತ ಕೆ., ಮಕ್ಕಳ ಮನೆ ಅಧ್ಯಕ್ಷ ಅವಿನಾಶ್ ದೇವರಮಜಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನೂಜಾಡಿ ಬಾಲಕೃಷ್ಣ ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾ ಬಾಲಕೃಷ್ಣ ಪೂಜಾರಿ ವೇದಿಕೆಯಲ್ಲಿದ್ದರು. ವಿದ್ಯಾರ್ಥಿಗಳನ್ನು ಗುರುತಿಸಿ ದತ್ತಿನಿಧಿ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ವಿತರಣೆ ಮಾಡಲಾಯಿತು. ಸಹ ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶಶಿಕಲಾ ಬಾಲಕೃಷ್ಣ ಪೂಜಾರಿ ವರದಿ ವಾಚಿಸಿದರು. ಬಾಲಕೃಷ್ಣ ಪೂಜಾರಿ ಸ್ವಾಗತಿಸಿದರು. ಶಿಕ್ಷಕರಿಂದ ಸಹಕರಿಸಿದರು. ಅವಿನಾಶ್ ದೇವರಮಜಲು ವಂದಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಲೆಕ್ಕಾಡಿ ಅಂಗನವಾಡಿ ಪುಟಾಣಿಗಳಿಂದ ಮತ್ತು ಶಾಲಾ ಮಕ್ಕಳಿಂದ ಪ್ರತಿಭಾ ದಿನಾಚರಣೆ ಪ್ರಯುಕ್ತ ಡ್ಯಾನ್ಸ್ ಕಾರ್ಯಕ್ರಮ ನಡೆಯಿತು.