ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

0

ಮೆಟ್ರಿಕ್ ಮೇಳ ಎಂಬ ವಿನೂತನ ಕಾರ್ಯಕ್ರಮವನ್ನು ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.27 ರಂದು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನ ಮತ್ತು ಕೌಶಲ್ಯ, ಲಾಭ-ನಷ್ಟ, ಗಣಿತದ ಲೆಕ್ಕಾಚಾರ, ಹಣದ ಮೌಲ್ಯದ ಬಗ್ಗೆ ಅರಿವು ಮೂಡಿಸಲು ಹಾಗೂ ಕೊಡುವ ಮತ್ತು ತೆಗೆದುಕೊಳ್ಳುವ, ಪದಾರ್ಥಗಳ ಗುಣಮಟ್ಟ ಬಗ್ಗೆ ತಿಳಿದುಕೊಂಡು ವ್ಯಾಪಾರ ಮಾಡುವ, ಅಷ್ಟೇ ಅಲ್ಲದೇ ಗ್ರಾಹಕರನ್ನು ತಮ್ಮೆಡೆಗೆ ಆಕರ್ಷಿಸುವ ಕೌಶಲ್ಯಗಳ ಅರಿವು ಮೂಡಿಸಲು, ಇದರೊಂದಿಗೆ ಪ್ರಾಮಾಣಿಕತೆ ಮೌಲ್ಯವನ್ನು ರೂಡಿಸಿಕೊಳ್ಳಲು ಇಲಾಖೆಯ ನಿಯಮದಂತೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ,
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ಗಿಡಗಳು, ತರಕಾರಿಗಳು, ಹಣ್ಣುಹಂಪಲುಗಳು ತಾವೇ ತಯಾರಿಸಿದ ತಂಪು ಪಾನೀಯಗಳು, ಸಿಹಿತಿಂಡಿ ತಿನಿಸುಗಳ ಜೊತೆಗೆ ಅಗತ್ಯವಾದ ಸಾಮಾಗ್ರಿಗಳನ್ನು ತಮ್ಮ ತಮ್ಮ ಪುಟ್ಟ ಪುಟ್ಟ ಸ್ಟಾಲ್ ಗಳಲ್ಲಿ ಮಾರಾಟ ಮಾಡಿದರು.


ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆಯಾದ ಶ್ರೀಮತಿ ಪೂರ್ಣಿಮಾ ಉಮೇಶ್ ಅಧ್ಯಕ್ಷ ಸ್ಥಾನ ವಹಿಸಿದ್ದು, ಪಂಚಾಯತ್ ಸದಸ್ಯ ಪದ್ಮನಾಭ ಶೆಟ್ಟಿ, ಡಾ.ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ದಾಮೋದರ ಗೌಡ ಕೆ , ಶಾಲಾ ಮುಖ್ಯೋಪಾಧ್ಯಾಯರಾದ ತೇಜಪ್ಪ ಎಸ್, ಶಿಕ್ಷಕರು , ಪೋಷಕರು, ಅಡುಗೆ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀ ಜಲದುರ್ಗಾ ದೇವಸ್ಥಾನದ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here