ನಾರ್ಕೋಡು ತರವಾಡು ದೈವಸ್ಥಾನದಲ್ಲಿ ಶ್ರೀ ದೈವಗಳ ಕಳಿಯಾಟ ಮಹೋತ್ಸವ

0

ಆಲೆಟ್ಟಿ ಗ್ರಾಮದ ಪ್ರತಿಷ್ಠಿತ ನಾರ್ಕೋಡು ತರವಾಡು ಮನೆಯ ದೈವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರ ಹರಿಸೇವೆ ಹಾಗೂ ಶ್ರೀ ವಿಷ್ಣುಮೂರ್ತಿ ಮತ್ತು ಧರ್ಮ ದೈವ ಹಾಗೂ ಪಾಷಾಣಮೂರ್ತಿ ಉಪದೈವಗಳ ಕಳಿಯಾಟ ಮಹೋತ್ಸವ ಜ.27 ರಿಂದ 28 ರ ತನಕ ವಿಜ್ರಂಭಣೆಯಿಂದ ಜರುಗಿತು.


ಜ.27 ರಂದು ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಗಣಹೋಮವಾಗಿ ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಿತು.

ಬಳಿಕ ನಾಗತಂಬಿಲ ಸೇವೆ ಮತ್ತು ಶ್ರೀ ವೆಂಕಟರಮಣ ದೇವರ ಹರಿಸೇವೆಯು ನಡೆದು ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಅದೇ ದಿನ ರಾತ್ರಿ ಉಪದೈವಗಳ ಕೋಲವು ನಡೆಯಿತು. ಮರುದಿನ ಬೆಳಗ್ಗೆ ಶ್ರೀ ರಕ್ತೇಶ್ವರೀ ಶ್ರೀ ವರ್ಣಾರ ಪಂಜುರ್ಲಿ ನಾಗಚಾಮುಂಡಿ ದೈವದ ಕೋಲವಾಗಿ ಮಧ್ಯಾಹ್ನ ಶ್ರೀ ವಿಷ್ಣುಮೂರ್ತಿ ಧರ್ಮದೈವ ಹಾಗೂ ಪಾಷಾಣಮೂರ್ತಿ ದೈವಗಳ ಕಳಿಯಾಟ ಮಹೋತ್ಸವ ನಡೆಯಿತು. ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು.

ನಾರ್ಕೋಡು ಕುಟುಂಬದ ಯಜಮಾನರು ಹಾಗೂ ಕುಟುಂಬದ ಹಿರಿಯ ಕಿರಿಯ ಸದಸ್ಯರು ಉಪಸ್ಥಿತರಿದ್ದರು. ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಗಿ ಸದ್ರಿ ದಿನಗಳಲ್ಲಿ ಅನ್ನ ಸಂತರ್ಪಣೆ ನೆರವೇರಿತು. ಊರ ಪರ ಊರಿನ ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.