ದನ ಕಳ್ಳ ಸಾಗಾಟದ ಆರೋಪಿಗೆ ಜಾಮೀನು ಮಂಜೂರು

0

ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಅಸ್ಕರ್ ಎಂಬಾತ ಜಾಮೀನಿನಿಂದ ಬಿಡುಗಡೆಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಜ.21 ರಂದು
ಸುಳ್ಯ ಕಡೆಯಿಂದ ಕೇರಳದ ಬಂದಡ್ಕ ಕಡೆಗೆ ಕೋಲ್ಚಾರು ಮಾರ್ಗವಾಗಿ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಿತ್ತಡ್ಕ ರೋಟರಿ ಶಾಲೆಯ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಆ ಕಾರಿನಲ್ಲಿ ಎರಡು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ಕಂಡುಬಂದಿತ್ತು.
ಈ ರಸ್ತೆ ಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಕಾರು ಪಲ್ಟಿಯಾದುದನ್ನು ಗಮನಿಸಿದಾಗ ದನ ಸಾಗಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದು ಸುಳ್ಯ ಪೋಲಿಸರಿಗೆ ವಿಷಯ ತಿಳಿಸಿದ ಮೇರೆಗೆ ಎಸ್.ಐ.ದಿಲೀಪ್ ಹಾಗೂ ಪೋಲಿಸ್ ಸಿಬ್ಬಂದಿ ಯವರು ಆಗಮಿಸಿ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನ್ಯಾಯಾಲಯದಲ್ಲಿ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಜನವರಿ 27ರಂದು ಆತ ಜಾಮೀನಿನಲ್ಲಿ ಬಿಡುಗಡೆ ಹೊಂದಿರುವುದಾಗಿ ತಿಳಿದುಬಂದಿದೆ.

LEAVE A REPLY

Please enter your comment!
Please enter your name here