ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಣ್ಣಾಮಲೈ ಭೇಟಿ

0

ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಅಣ್ಣಾಮಲೈ ಜ.27 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.


ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಅಣ್ಣಾಮಲೈ ಅವರನ್ನು ಸುಬ್ರಹ್ಮಣ್ಯ ದೇವಸ್ಥಾನದ ಮೀಟಿಂಗ್ ಹಾಲ್ ಸಭಾಂಗಣದಲ್ಲಿ ದೇವಳದ ವತಿಯಿಂದ ಗೌರವಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀವತ್ಸಾ ಬೆಂಗಳೂರು, ಶೋಭಾ ಗಿರಿಧರ್, ಪ್ರಮುಖರಾದ ರಾಜೇಶ್ ಎನ್.ಎಸ್., ದಿನೇಶ್ ಸಂಪ್ಯಾಡಿ, ಶ್ರೀಕುಮಾರ್ ಸುಬ್ರಹ್ಮಣ್ಯ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.