ಸುದ್ದಿ ಸೌಹಾರ್ದ ಸಹಕಾರಿಯ ಸುಳ್ಯ ಶಾಖೆ ಉದ್ಘಾಟನೆ

0

ಸುದ್ದಿ ಕೃಷಿ‌ ಸೇವಾ ಕೇಂದ್ರ ಲೋಕಾರ್ಪಣೆ

ಪುತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸುದ್ದಿ ಸೌಹಾರ್ದ ಸಹಕಾರಿ ಸಂಘದ ಸುಳ್ಯ ಶಾಖೆ ಸುಳ್ಯದ ರಾಜಶ್ರೀ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.


ಸುದ್ದಿ ಸಹಕಾರಿ ಸಂಘದ ಶಾಖಾ ಕಚೇರಿಯ ಪಕ್ಕದ ಕೊಠಡಿಯಲ್ಲಿ ಸುದ್ದಿ ಕೃಷಿ ಸೇವಾ ಕೇಂದ್ರವು ಆರಂಭಗೊಂಡಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರು ನೂತನ ಶಾಖೆಯನ್ನು ಉದ್ಘಾಟಿಸಿದರು.
ಸುದ್ದಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಡಾ.ಯು.ಪಿ.ಶಿವಾನಂದರು ಅಧ್ಯಕ್ಷತೆ ವಹಿಸಿದ್ದರು.

ಕೃಷಿ ಕೇಂದ್ರವನ್ನು ಉದ್ಘಾಟಿಸಿದ ಮೀನುಗಾರಿಕಾ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರು ಸಭಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.


ಲಾಕರ್ ರನ್ನು ರಾಜ್ಯ‌ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಯವರು ಉದ್ಘಾಟಿಸಿದರು. ಮೊದಲ ಠೇವಣಿ ಪತ್ರವನ್ನು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ರಾಜೀವಿ ಆರ್ ರೈ ಹಸ್ತಾಂತರ ಮಾಡಿದರು.


ಸುದ್ದಿ ಸೌಹಾರ್ದ ಸಹಕಾರಿ ಸಂಘದ ಸುಳ್ಯ ಶಾಖಾ ಸಲಹಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ. ಜಯರಾಮ, ಗುರುಪ್ರಸಾದ್ ಬಂಗೇರ, ನ. ಪಂ.ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ , ಸುಳ್ಯ ರಾಜಶ್ರೀ ಕಾಂಪ್ಲೆಕ್ಸ್ ಮಾಲಕ ಕೃಷ್ಣ ರಾವ್ ನಾವೂರು, ಸುಳ್ಯ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್, ಪಂಜ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ, ಸುದ್ದಿ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ಸಿ.ಇ.ಒ. ನರೇಂದ್ರ ಹಾಗೂ ನಿರ್ದೇಶಕರು, ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿ‌ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕ ಹರೀಶ್ ಬಂಟ್ವಾಳ್ ಸ್ವಾಗತಿಸಿದರು. ದುರ್ಗಾಕುಮಾರ್ ನಾಯರ್ ಕೆರೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here