ಜಾಲ್ಸೂರು ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ

0

ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಜ.29ರಂದು ಜರುಗಿತು.
ಬೆಳಿಗ್ಗೆ 12 ತೆಂಗಿನಕಾಯಿ ಗಣಪತಿ ಹವನ, ನಾಗಸಾನಿಧ್ಯದಲ್ಲಿ ನಾಗತಂಬಿಲ, ಪಾದುಕಾಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಕನಕಮಜಲಿನ ಸ್ವರ್ಣಾಂಜಲಿ ಮಹಿಳಾ ಭಜನಾ ಮಂಡಳಿಯ ವತಿಯಿಂದ ಭಜನೆ, ಮಧ್ಯಾಹ್ನ 12.30ರಿಂದ ಶ್ರೀ ಗುರುರಾಘವೇಂದ್ರ ಸ್ವಾಮಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು.

ಸಂಜೆ ನಾಗಸಾನಿಧ್ಯದಲ್ಲಿ ಆಶ್ಲೇಷ ಬಲಿ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ.
ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ಬಾಬು ಪಾಟಾಳಿ ಅರಿಯಡ್ಕ, ಕಾರ್ಯದರ್ಶಿ ಮೋಹನ ಬೆಳ್ಚಪ್ಪಾಡ ಜಾಲ್ಸೂರು, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಮಾದವ ಗೌಡ ಕಾಳಮನೆ, ಧರ್ಮಪಾಲ ಕೆಮನಬಳ್ಳಿ, ಕಮಲಾಕ್ಷ ನಂಗಾರು, ಆತ್ಮಾನಂದ ಗಬ್ಬಲಡ್ಕ, ದಾಮೋದರ ಮಹಾಬಲಡ್ಕ, ಶಿವಪ್ಪ ಕಜೆಗದ್ದೆ, ಗೋಪಾಲ ಮಹಾಬಲಡ್ಕ, ಕೆ.ಎಂ. ಬಾಬು ಕದಿಕಡ್ಕ, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here