ದುಗ್ಗಲಡ್ಕ ಸಾಂಸ್ಕೃತಿಕ ಉತ್ಸವದಲ್ಲಿ ರಂಗನಟ ಡಾ|ದೇವದಾಸ್ ಕಾಪಿಕಾಡ್ ರವರಿಗೆ ಗೌರವ ಸನ್ಮಾನ

0

ದುಗಲಡ್ಕ ಮಿತ್ರ ಯುವಕ ಮಂಡಲ ಕೊಯಿಕುಳಿ ಕುರಲ್ ತುಳುಕೂಟ ಇದರ ಜಂಟಿ ಆಶ್ರಯದಲ್ಲಿ ನಡೆದ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ಡಾ|ದೇವದಾಸ್ ಕಾಪಿಕಾಡ್ ರವರನ್ನು ಜಂಟಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಮುಖ್ಯ ಅಭ್ಯಾಗತರಾಗಿ ಜಿ.ಪಂ.ಮಾಜಿ ಸದಸ್ಯ ಭರತ್ ಮುಂಡೋಡಿ, ಕೆ.ಪಿ.ಸಿ.ಸಿ.ಸದಸ್ಯ ನಂದ ಕುಮಾರ್, ನಿವೃತ್ತ. ಮುಖ್ಯ ಶಿಕ್ಷಕ ದೊಡ್ಡಣ್ಣ ಬರೆಮೇಲು, ಸಾಂಸ್ಕೃತಿಕ ಉತ್ಸವದ ಸಂಚಾಲಕ ಕೆ.ಟಿ.ವಿಶ್ವನಾಥ್, ಕುರಲ್ ತುಳುಕೂಟದ ಅಧ್ಯಕ್ಷೆ ನವ್ಯ ದಿನೇಶ್ ಕೊಯಿಕುಳಿ,ಯುವಕ ಮಂಡಲದ ಅಧ್ಯಕ್ಷ ಚೇತನ್ ಕಲ್ಮಡ್ಕ‌ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಕೆ.ಟಿ ವಿಶ್ವನಾಥ ಸ್ವಾಗತಿಸಿದರು. ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here