ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ
ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ
ಮಹಾರುದ್ರಯಾಗ – ಕಲಶಾಭಿಷೇಕ

0

ಪೆರಾಜೆ ಶ್ರಿ ಶಾಸ್ತಾವು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಜ.೩೦ರಂದು ಬೆಳಗ್ಗೆ ೯ ರಿಂದ ಮಹಾರುದ್ರಯಾಗ, ನಂತರ ದೇವರಿಗೆ ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ ನಡೆಯಿತು. ನೂರಾರು ಭಕ್ತರು ಆಗಮಿಸಿ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.