ಮುಂಬರುವ ವಿಧಾನಸಭಾ ಚುನಾವಣೆಗೆ ಮತಗಟ್ಟೆ ಕೇಂದ್ರಗಳ ಮೂಲಭೂತ ಸೌಕರ್ಯಗಳ ಕೊರತೆಗಳ ಪರಿಶೀಲನಾ ಸಭೆ

0

2023 ರ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಮತಗಟ್ಟೆಗಳಲ್ಲಿ ಮೂಲಭೂತ ಸೌಲಭ್ಯ ಕೊರತೆಗಳ ದುರಸ್ತಿ ಕಾರ್ಯಗಳ ಕುರಿತು ಇಂದು ಸುಳ್ಯ ತಹಶೀಲ್ದಾರ್ ಕು.ಅನಿತಾ ಲಕ್ಷ್ಮಿ ರವರ ನೇತೃತ್ವದಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.

ಸುಳ್ಯ, ಕಡಬ ಸೇರಿದಂತೆ ಸುಳ್ಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವಂತಹ ಪೋಲಿಂಗ್ ಸೆಂಟರ್ ಗಳಾದ ಶಾಲೆಗಳು, ಗ್ರಾಮ ಪಂಚಾಯತ್ ಕಟ್ಟಡಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು ಮೂಲಭೂತ ಸೌಲಭ್ಯಗಳ ಕೊರತೆಗಳ ಪಟ್ಟಿಯನ್ನು ತಯಾರಿಸಿ ಅವುಗಳ ದುರಸ್ತಿ ಕಾರ್ಯಗಳನ್ನು ಮಾಡುವ ಕುರಿತು ಇಂದು ಸಭೆಯಲ್ಲಿ ಚರ್ಚಿಸಲಾಗಿದೆ.

ಈ ಸಭೆಯಲ್ಲಿ ಶಾಲೆಗಳಿಗೆ ಸಂಬಂಧಿಸಿದಂತೆ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಗ್ರಾಮ ಪಂಚಾಯತ್ ಕಚೇರಿಗಳ ಕಟ್ಟಡದ ಕುರಿತು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ರಶ್ಮಿ, ಚುನಾವಣಾ ಇಲಾಕಾ ಅಧಿಕಾರಿ ಚಂದ್ರಕಾಂತ್, ಸುಳ್ಯ ಆರ್ ಐ ಕೊರಗಪ್ಪ ಹೆಗ್ಡೆ, ಪಂಜ ಆರ್ ಐ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.