ಗುತ್ತಿಗಾರು ಶಾಲೆಯಲ್ಲಿ ಕ್ರೀಡೋತ್ಸವ

0

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ಜ.28 ರಂದು ಕ್ರೀಡೋತ್ಸವ ಜರುಗಿತು. ಗ್ರಾಮ ಪಂಚಾಯತ್ ಸದಸ್ಯ ಮಾಯಿಲಪ್ಪ ಕೊಂಬೊಟ್ಟು ಕ್ರೀಡಾಕೂಟ ಉದ್ಘಾಟಿಸಿದರು. ಎಸ್. ಡಿ. ಎಂ. ಸಿ ಅಧ್ಯಕ್ಷ ವೆಂಕಟ್ ದಂಬೆಕೊಡಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಯಾನಂದ ಮುತ್ಲಾಜೆ, ಕಾರ್ಯದರ್ಶಿ ಲೋಕೇಶ್ವರ ಡಿ. ಆರ್, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀಮತಿ ಕುಲಶ್ರೀ ಬಾಕಿಲ, ಕ್ರೀಡೋತ್ಸವ ಸಮಿತಿ ಸಂಚಾಲಕ ಮಾಧವ ಎರ್ದಡ್ಕ, ಬ್ಲೆಸ್ಸ್ಡ್ ಕುರಿಯಾಕೋಸ್ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ರಮೇಶ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಸ್ವಾಗತಿಸಿ, ಸಹ ಶಿಕ್ಷಕ ಲೋಕೇಶ್ ವಂದಿಸಿದರು, ಶಿಕ್ಷಕ ಶಶಿಧರ್ ಮಾವಿನಕಟ್ಟೆ ಕಾರ್ಯಕ್ರಮ ನಿರೂಪಿಸಿದರು.