ಅಡ್ಕಾರು ಅಂಜನಾದ್ರಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ವರ್ಷಾವಧಿ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಜಾಲ್ಸೂರು ಗ್ರಾಮದ ಅಡ್ಕಾರು ಅಂಜನಾದ್ರಿಯ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ವರ್ಷಾವಧಿ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜ.28ರಂದು ರಾತ್ರಿ ಬಿಡುಗಡೆಗೊಳಿಸಲಾಯಿತು.
ಜ.28ರಂದು ಶ್ರೀ ಕ್ಷೇತ್ರದಲ್ಲಿ ಭಜನೆ ಹಾಗೂ ಮಹಾಪೂಜೆಯ ಬಳಿಕ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್, ಶ್ರೀ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಶಿವರಾಮ ರೈ ಕುರಿಯಗುತ್ತು ಮತ್ತು ಆಡಳಿತ ಸಮಿತಿಯ ಸದಸ್ಯರುಗಳು, ಹಾಗೂ ಜಾತ್ರಾ ಮಹೋತ್ಸವ ಸಮಿತಿ , ಸೇವಾ ಸಮಿತಿ, ಮಹಿಳಾ ಸಮಿತಿ, ಭಜನಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.