ಬಾಳಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ರಸ್ತೆ,ವಿದ್ಯುತ್,ಕುಡಿಯುವ ನೀರಿನ ಬಗ್ಗೆ ಚರ್ಚೆ

ಬಾಳಿಲ ಗ್ರಾಮ ಪಂಚಾಯತ್ 2022- 23 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಚಾಕೋಟೆಯವರ ಅಧ್ಯಕ್ಷತೆಯಲ್ಲಿ ಜ.31 ರಂದು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.
ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ನಾಗರಾಜ್ ರವರು ನೋಡೆಲ್ ಅಧಿಕಾರಿಯಾಗಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೂವಪ್ಪ ಗೌಡರವರು ಸ್ವಾಗತಿಸಿದರು.


ಕಾರ್ಯದರ್ಶಿ ಜಯಶೀಲ ರೈ ವರದಿ ಮಂಡಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ತ್ರಿವೇಣಿ ಕೆ.ವಿ, ಸದಸ್ಯರಾದ ತಾರಾನಾಥ ರೈ, ರವೀಂದ್ರ ರೈ, ಶ್ರೀಮತಿ ಸುಶೀಲ ಕೆ, ಶ್ರೀಮತಿ ಪಾವನ ಕೆ , ಜೆ.ಹರ್ಷ, ರಮೇಶ್ ರೈ, ಆನಂದ ಪಿ.ಉಪಸ್ಥಿತರಿದ್ದರು.
ಇಲಾಖಾಧಿಕಾರಿಗಳು ಇಲಾಖೆಗಳ ಬಗ್ಗೆ ಮಾಹಿತಿ ನೀಡಿದರು.
ಶ್ರೀಮತಿ ಮಧುರಾರವರು ಪ್ರಾರ್ಥಿಸಿದರು.