ಐವರ್ನಾಡು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಎಸ್.ಎನ್.ಮನ್ಮಥರವರಿಂದ ಪುಸ್ತಕ ಕೊಡುಗೆ

0

ಐವರ್ನಾಡು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥರವರು ರೂ.2,500 ರೂ ಮೌಲ್ಯದ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು.
ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಲೀಲಾವತಿಯವರು ಪುಸ್ತಕಗಳನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ, ನಿರ್ದೇಶಕ ವಾಸುದೇವ ನಿಡುಬೆ ಉಪಸ್ಥಿತರಿದ್ದರು.