ಫೆ.01 ಮತ್ತು ಫೆ. 2: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ

0

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ಫೆ.01 ಮತ್ತು ಫೆ. 2 ರಂದು ನಡೆಯಲಿದೆ. ಜ. 25 ರಂದು ಗೊನೆ ಮುಹೂರ್ತ ನೆರವೇರಿದ್ದು,
ಫೆ .1 ರಂದು ಬೆಳಿಗ್ಗೆ ಗಣಪತಿ ಹೋಮ, ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ದೈವಗಳ ಭಂಡಾರ ತೆಗೆಯುವುದು, ಚೆಂಡೆವಾದನ, ರಾತ್ರಿ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ ದೇವರ ಉತ್ಸವ ಬಲಿ ಹೊರಟು, ವಸಂತಕಟ್ಟೆ ಪೂಜೆ ನಡೆದು, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ.

ಫೆ.2 ರ ಬೆಳಗ್ಗೆಗಿನ ಜಾವ ಉಳ್ಳಾಕ್ಲು ಉಳ್ಳಾಲ್ತಿ ನೇಮ, ಬಳಿಕ ಕುಮಾರ ದೈವದ ನೇಮ ನಡೆದು ಬೆಳಿಗ್ಗೆ ಗಂಟೆ 8-00ಕ್ಕೆ ಶ್ರೀ ದೇವರಿಗೆ ಪೂಜೆ, ಬಳಿಕ ರಕ್ತಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ ನಡೆದು ಮಧ್ಯಾಹ್ನ ಗಮಹಾಪೂಜೆ, ದೈವಗಳ ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗುಳಿಗ ಕೋಲ, ಪ್ರಸಾದ ವಿತರಣೆ ನಡೆಯಲಿದೆ.