ಪಂಜ:ಪೈಂದೋಡಿ ದೇವಳದಲ್ಲಿ
ಶ್ರೀ ದೇವರಿಗೆ ರಂಗ ಪೂಜೆ

0

ಪಂಜ ಶ್ರೀ ಪೈಂದೋಡಿ ಸುಬ್ರಾಯ ದೇವಸ್ಥಾನ ಇದರ ಪ್ರತಿಷ್ಠಾ ವಾರ್ಷಿಕೋತ್ಸವವು ಜ. 31.ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರುಗಿತು.

ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ವೈದಿಕ ಮಂತ್ರಾಕ್ಷತೆ ,ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.
ಮುಂಜಾನೆ ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಆಶ್ಲೇಷ ಬಲಿ ಪೂಜೆ, ಕಲಶಾಭಿಷೇಕ, ದೈವಗಳಿಗೆ ಮತ್ತು ನಾಗದೇವರಿಗೆ ತಂಬಿಲ,ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು.ದೇವಳದ ಆಡಳಿತ ಸಮಿತಿಯವರು, ಅಭಿವೃದ್ಧಿ ಸಮಿತಿಯವರು, ಉತ್ಸವ ಸಮಿತಿಯ
ಸಂಚಾಲಕರು, ಸದಸ್ಯರು, ಭಕ್ತಾದಿಗಳು ಪಾಲ್ಗೊಂಡಿದ್ದರು.

.

.

LEAVE A REPLY

Please enter your comment!
Please enter your name here