ಕಾಯರ್ತೋಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ : ವೈದಿಕ ಕಾರ್ಯಕ್ರಮ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ಆರಂಭಗೊಂಡಿದ್ದು, ಎರಡನೇ ದಿನವಾದ ಇಂದು ವೈದಿಕ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ಗಣಪತಿ ಹೋಮ, ಪ್ರಾಯಶ್ಚಿತ ಹೋಮಗಳು, ಚತುಃಶುದ್ದಿ, ಧಾರಾ, ಅವಗಾಹ, ಪಂಚಕ, ಅಂಕುರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ಊರ ಹಾಗೂ ಪರಊರ ಭಕ್ತಾದಿಗಳು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.