ಪಂಜ:ಜಾತ್ರೋತ್ಸವಕ್ಕೆ ಧ್ವಜಾರೋಹಣ, ಫೆ.5:ದರ್ಶನ ಬಲಿ- ಫೆ.6:ಬ್ರಹ್ಮರಥೋತ್ಸವ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಆರಂಭ ಗೊಂಡಿದೆ. ಫೆ.1 ರಂದು ರಾತ್ರಿ ಧ್ವಜಾರೋಹಣ ನಡೆದು, ಮಹಾಪೂಜೆ, ಪ್ರಸಾದ ವಿತರಣೆ,ಅನ್ನ ಸಂತರ್ಪಣೆ ನಡೆಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಬೈಲುಗುತ್ತು , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ನಾರಾಯಣ ಗೌಡ ಕೋರ್ಜೆ, ಶಂಕರ್ ಕುಮಾರ್, ಲಕ್ಷ್ಮಣ ಗೌಡ ಆಕ್ರಿಕಟ್ಟೆ, ರಾಮಚಂದ್ರ ಭಟ್,ದಿನೇಶ್ ಗರಡಿ,ಶ್ರೀಮತಿ ಸೌಮ್ಯ ಪಿ ಆರ್, ಶ್ರೀಮತಿ ರೋಹಿಣಿ ಆರ್ನೋಜಿ , ಸಲಹಾ ಸಮಿತಿಯ ಡಾ.ರಾಮಯ್ಯ ಭಟ್ , ಚಂದ್ರಶೇಖರ ಶಾಸ್ತ್ರಿ,ದೇವಳದ ಮಾಜಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ , ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ,ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಮಾಯಿಲಪ್ಪ ಗೌಡ ಪಟ್ಟೆ ,ಗಂಗಾಧರ ಗುಂಡಡ್ಕ, ಧರ್ಮಪಾಲ ನಡ್ಕ,ಪ್ರಕಾಶ್ ಜಾಕೆ, ಶ್ರೀಮತಿ ಕವಿತಾ ಶೆಟ್ಟಿಗದ್ದೆ ,ದೈವದ ಮಧ್ಯಸ್ಥ ತಿಮ್ಮಪ್ಪ ಗೌಡ ಪುತ್ಯ,ಉತ್ಸವ ಸಮಿತಿ ಸಂಚಾಲಕರು, ಸದಸ್ಯರು,ಸೀಮೆಯ ನೂರಾರು ಭಕ್ತರು ಪಾಲ್ಗೊಂಡಿದ್ದರು.

ಫೆ.2 ರಂದು ಮಹಾ ಪೂಜೆ, ನಿತ್ಯಬಲಿ.ಫೆ.3.ರಂದು ಮಹಾಪೂಜೆ , ನಿತ್ಯಬಲಿ ಸಂಜೆ ಹಸಿರು ಕಾಣಿಕೆ ಮೆರವಣಿಗೆ ಪುತ್ಯ ಕಟ್ಟೆಯಿಂದ ಆರಂಭ ಗೊಂಡು ದೇವಳಕ್ಕೆ ಸಮರ್ಪಣೆ ಗೊಳ್ಳಲಿದೆ.ದಂಡಮಾಲೆ ಹಾಕಿ ಬಲಿ , ಬೇತಾಳಗಳು ಇಳಿಯುವುದು.ಫೆ4. ರಂದು ಶ್ರೀ ದೇವರ ಉತ್ಸವ, ಮಹಾ ಪೂಜೆ.ಫೆ.5 ರಂದು ಹಗಲು ಶ್ರೀ ದೇವರ ದರ್ಶನ ಬಲಿ.ಫೆ.6.ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಜರುಗಲಿದೆ.

*ಸಾಂಸ್ಕೃತಿಕ ಕಾರ್ಯಕ್ರಮಗಳು*:

ಫೆ.4 ರಂದು ರಾತ್ರಿ ಗಂಟೆ 9 ರಿಂದ ಡಾನ್ಸ್ & ಬೀಟ್ಸ್ ಪಂಜ ಮತ್ತು ಬೆಳ್ಳಾರೆ ಇದರ ವಿದ್ಯಾರ್ಥಿಗಳಿಂದ ನೃತ್ಯ ವೈಭವ.ಫೆ.5ರಂದು ಸಂಜೆ ಗಂಟೆ 7 ರಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಧರ್ಮಸ್ಥಳ ಇವರಿಂದ ಯಕ್ಷಗಾನ ಬಯಲಾಟ.ಫೆ.6 ರಂದು ಸಂಜೆ ಗಂಟೆ 5 ರಿಂದ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರ ಕಲಾ ಕ್ಷೇತ್ರ ಪಂಜ ಇದರ ವಿದ್ಯಾರ್ಥಿಗಳಿಂದ’ಶಿವಲೀಲೆ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.