ಫೆ.5 ರಂದು ಸುಳ್ಯದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ, *ಜಿಲ್ಲೆಯಲ್ಲಿ 8 ಸ್ಥಾನ ಕಾಂಗ್ರೆಸ್ ಗೆಲುವು:ಹರೀಶ್ ಕುಮಾರ್

0

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಕರಾವಳಿ ಭಾಗದ ಐದು ಜಿಲ್ಲೆಗಳಲ್ಲಿ ಕರಾವಳಿ ಪ್ರಜಾಧ್ವನಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕರಾವಳಿ ಪ್ರಜಾಧ್ವನಿ ಯಾತ್ರೆ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ದ.ಕ.ಜಿಲ್ಲಾ ಅಧ್ಯಕ್ಷ ಹಾಗು ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯವಿಧಾನ ಸಭಾ ಕ್ಷೇತ್ರದ ಜಿಲ್ಲಾ ಪಂಚಾಯತ್ ವ್ಯಾಪ್ತಿಗಳನ್ನು ಒಳಗೊಂಡಂತೆ 4 ಕಡೆ ಕಾರ್ಯಕ್ರಮ ನಡೆಯಲಿದೆ. ಎಐಸಿಸಿ ಪ್ರಧಾನ‌ ಕಾರ್ಯದರ್ಶಿ ಹಾಗು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಮಧು ಬಂಗಾರಪ್ಪ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ನೆಲ್ಯಾಡಿಯಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. 12 ಗಂಟೆಗೆ ಬೆಳ್ಳಾರೆಯಲ್ಲಿ 3 ಗಂಟೆಗೆ ಗುತ್ತಿಗಾರಿನಲ್ಲಿ ಸಂಜೆ 5ಕ್ಕೆ ಸುಳ್ಯ ನಗರದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿ ಬೂತ್ ಮಟ್ಟದ ಕಾರ್ಯಕರ್ತರಿಗೆ ಕಾಂಗ್ರೆಸ್ ಆಶಯಗಳನ್ನು ತಲುಪಿಸುವ ಹಿನ್ನಲೆಯಲ್ಲಿ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ದಕ ಜಿಲ್ಲೆಯಲ್ಲಿ 8 ಸ್ಥಾನ ಗೆಲ್ಲುವ ವಿಶ್ವಾಸ

ಕೇಂದ್ರ ಹಾಗು ರಾಜ್ಯದ ಡಬಲ್ ಇಂಜಿನ್ ಸರಕಾರದ ಇಂಜಿನ್ ಕೆಟ್ಟು ಹೋಗಿದ್ದು ಜನರು ಭ್ರಮ ನಿರಶನಗೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಈ ಬಾರಿ ಬದಲಾವಣೆಯ ನಿರೀಕ್ಷೆಯಿದ್ದು ಎಂಟು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಇದೆ ಎಂದು ಅವರು ಹೇಳಿದ್ದಾರೆ. ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿನ ಆಕಾಂಕ್ಷಿ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಕ್ಕೆ ಕಳುಹಿಸಲಾಗಿದ್ದು ಅಲ್ಲಿ ಪರಿಶೀಲನೆಯಾಗಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಅನುಮತಿಯೊಂದಿಗೆ ಆದಷ್ಟು ಶೀಘ್ರ ಅಭ್ಯರ್ಥಿ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಅಡಿಕೆ ಹಳದಿ ರೋಗ, ಎಲೆಚುಕ್ಕಿ ರೋಗ ಸಮಸ್ಯೆ ಪ್ರಣಾಳಿಕೆಯಲ್ಲಿ

ಅಡಿಕೆಯ ಹಳದಿ ರೋಗ, ಎಲೆ ಚುಕ್ಕಿ ರೋಗದ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ನಡೆದಿದೆ. ಅಡಿಕೆ ಹಳದಿ ರೋಗ, ಎಲೆ ಚುಕ್ಕಿ ರೋಗದ ಸಂಶೋಧನೆ ಬಗ್ಗೆ ಹಾಗು ಪರಿಹಾರ ಕ್ರಮದ ಬಗ್ಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ಕರಾವಳಿ ಜಿಲ್ಲೆಗೆ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆಯನ್ನು ತಯಾರಿಸಲಾಗಿದ್ದು ಮೊನ್ನೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಬಿಡುಗಡೆಯಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಚ ಸುಧೀರ್ ಕುಮಾರ್‌ ಶೆಟ್ಟಿ,ಕೆಪಿಸಿಸಿ ಸಂಯೋಜಕ, ಸುಳ್ಯ ಬ್ಲಾಕ್ ಉಸ್ತುವಾರಿ ಜಿ.ಕೃಷ್ಣಪ್ಪ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಮುಖಂಡರಾದ ರಾಜೀವಿ ರೈ, ಎಂ.ವೆಂಕಪ್ಪ ಗೌಡ, ಕೆ. ಗೋಕುಲ್‌ದಾಸ್, ಪಿ.ಎಸ್.ಗಂಗಾಧರ, ಕೆ.ಪಿ.ಥಾಮಸ್, ಪಿ.ಪಿ.ವರ್ಗೀಸ್, ಕೃಷ್ಣಪ್ಪ ಗೌಡ ನೆಕ್ರಪ್ಪಾಡಿ, ವಿಜಯಕುಮಾರ್ ಸೊರಕೆ, ಸರ್ವೋತ್ತಮ ಗೌಡ, ಶರೀಫ್ ಕಂಠಿ, ಶಾಫಿ ಕುತ್ತಮೊಟ್ಟೆ, ಸಿದ್ದಿಕ್ ಕೊಕ್ಕೊ, ಭವಾನಿಶಂಕರ ಕಲ್ಮಡ್ಕ, ಶಶಿಧರ ಎಂ.ಜೆ, ಕಳಂಜ ವಿಶ್ವನಾಥ ರೈ, ಶೀನಪ್ಪ ಗೌಡ, ನಂದರಾಜ ಸಂಕೇಶ, ಸತೀಶ್ ಕೆಡೆಂಜಿ, ನೀರಜ್ ಚಂದ್ರ ಪಾಲ್, ಅವಿನಾಶ್, ಸತ್ಯಕುಮಾರ್ ಆಡಂಜ, ಜಯಪ್ರಕಾಶ್ ‌ನೆಕ್ರಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.