ಸುಳ್ಯ ಪೊಲೀಸ್ ವೃತ್ತದ ನೂತನ ವೃತ್ತ ನಿರೀಕ್ಷಕರಾದ ರವೀಂದ್ರ ಸಿ.ಎಂ. ಅಧಿಕಾರ ಸ್ವೀಕಾರ

0

ಪೊಲೀಸ್ ಠಾಣಾ ಉಪನಿರೀಕ್ಷಕರೊಂದಿಗೆ ಸಭೆ

ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿಯವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ನೂತನವಾಗಿ ಸುಳ್ಯ ವೃತ್ತ ನಿರೀಕ್ಷಕರಾಗಿ ರವೀಂದ್ರ ಸಿ.ಎಂ.ರವರು ಇಂದು ಅಧಿಕಾರ ಸ್ವೀಕರಿಸಿದರು.

ಹಾಸನ ಡಿಸಿಆರ್‌ಬಿಯಲ್ಲಿ ಸೇವೆ ಸಲ್ಲಿಸಿದ ಇವರು ಸುಳ್ಯ ವೃತ್ತ ನೀರಿಕ್ಷಕರಾಗಿ ಸುಳ್ಯಕ್ಕೆ ಆಗಮಿಸಿದ್ದಾರೆ.

ಸುಳ್ಯದಲ್ಲಿ ಅಧಿಕಾರ ಸ್ವೀಕರಿಸಿದ ಪ್ರಥಮ ದಿನವಾದ ಇಂದು ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಸುಳ್ಯ,ಬೆಳ್ಳಾರೆ, ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳ ಉಪನಿಧಿಕ್ಷಕರ ಸಭೆಯನ್ನು ನಡೆಸಿ ಆಯಾಯ ಠಾಣೆಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್,ಬೆಳ್ಳಾರೆ ಪೋಲಿಸ್ ಠಾಣಾ ಉಪನಿರೀಕ್ಷಕ ಸುಹಾಸ್, ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಮಂಜುನಾಥ್ ಉಪಸ್ಥಿತರಿದ್ದರು.