ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

0

ಧಾರ್ಮಿಕ ಕಾರ್ಯಕ್ರಮ

ಸುಳ್ಯ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವವು ಜ.31 ರಿಂದ ಪ್ರಾರಂಭಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.

ಇಂದು ಬೆಳಿಗ್ಗೆ ಗಣಪತಿ ಹೋಮ, ತ್ರಿಕಾಲ ಪೂಜೆ, ಸಂಹಾರ ತತ್ವ ಹೋಮ, ತತ್ವ ಕಲಶ ಪೂಜೆ, ಕುಂಭೇಶ ಕರ್ಕರಿ ಪೂಜೆ, ಶಯ್ಯಾ ಪೂಜೆ, ತತ್ವ ಕಲಶಾಭಿಷೇಕ, ಜೀವ ಕಲಶ ಪೂಜೆ, ಜೀವೋದ್ವಾಸನೆ, ಜೀವ ಕಲಶ ಶಯ್ಯೋನ್ನಯನ, ಅಂಕುರ ಪೂಜೆ, ತ್ರಿಕಾಲ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
ಊರ ಹಾಗೂ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.
ಸಂದರ್ಭದಲ್ಲಿ ಎಲ್ಲಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.