ಕರ್ನಾಟಕ ಬ್ಯಾಂಕ್ ನೇಮಕಾತಿಯಲ್ಲಿ ಆಯ್ಕೆಯಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯ ವಿದ್ಯಾರ್ಥಿ ಸುಳ್ಯದ ನಿರಂಜನ್ ಜೆ. ಯವರಿಗೆ ಸನ್ಮಾನ

0


ಸುಳ್ಯ ತಾಲೂಕು ಸಂಪಾಜೆಯ ನಿರಂಜನ್ ಜೆ. ಯವರು ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯಲ್ಲಿ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಪಡೆದು 2022-23 ನೇ ಸಾಲಿನ ಕರ್ನಾಟಕ ಬ್ಯಾಂಕ್ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅಂತಿಮ ಹಂತದ ನೇರ ಸಂದರ್ಶನದಲ್ಲಿ ಉತ್ತಮ ಸಾಧನೆಯನ್ನು ಮಾಡಿ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಚಟ್ಟೆಕಲ್ಲು ನಿವಾಸಿ ಕಲ್ಲುಗುಂಡಿಯಲ್ಲಿ ಕ್ಲಿನಿಕ್ ಹೊಂದಿರುವ ಡಾ.ಯು.ಪಿ.ಜಯರಾಮ್ ಹಾಗೂ ಸಂಪಾಜೆ ಜೂನಿಯರ್ ಕಾಲೇಜ್ ಉಪನ್ಯಾಸಕಿ ಶ್ರೀಮತಿ ಶ್ರೀವಿದ್ಯಾ ದಂಪತಿಯ ಪುತ್ರ ನಿರಂಜನ್ ಜೆ. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್.ಸಿ ಮಾಡುತ್ತಿದ್ದು, ತನ್ನ ಸ್ನಾತಕೋತ್ತರ ಪದವಿ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಯನ್ನು ಕೂಡ ಪಡೆಯುತ್ತಿದ್ದರು. ತನ್ನ ಪ್ರಥಮ ಪ್ರಯತ್ನದಲ್ಲೇ ಬ್ಯಾಂಕಿಂಗ್ ಪರೀಕ್ಷೆ ಪಾಸಾಗಿರುತ್ತಾರೆ. ಅವರನ್ನು ಕರ್ನಾಟಕ ಬ್ಯಾಂಕಿನ ಚೆನ್ನೈ ಶಾಖೆಗೆ ನಿಯುಕ್ತಿಗೊಳಿಸಲಾಗಿದೆಯೆಂದು ತಿಳಿದುಬಂದಿದೆ.
ನಿರಂಜನ್ ರವರಿಗೆ ವಿದ್ಯಾಮಾತಾ ಅಕಾಡೆಮಿಯಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಅತಿಥಿಗಳಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತದ ಮೊಕ್ತೇಸರರಾದ ಮುಳಿಯ ಕೇಶವ ಪ್ರಸಾದ್ ಮತ್ತು ಜೆಸಿಐ ಪುತ್ತೂರು ನಿಕಟಪೂರ್ವ ಅಧ್ಯಕ್ಷರಾದ ಶಶಿರಾಜ್ ರೈ ಉಪಸ್ಥಿತರಿದ್ದರು.
ವಿದ್ಯಾಮಾತಾ ಅಕಾಡೆಮಿಯ ಸ್ಥಾಪಕರಾದ ಭಾಗ್ಯೇಶ್ ರೈಯವರು ವಿದ್ಯಾಮಾತಾ ಅಕಾಡೆಮಿಯ ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು. ನಿರಂಜನ್ ರವರ ತಂದೆ ಡಾ.ಯು.ಪಿ.ಜಯರಾಮ್ ಮತ್ತು ತಾಯಿ ಶ್ರೀವಿದ್ಯಾ ರವರು ವಿದ್ಯಾಮಾತಾ ಅಕಾಡೆಮಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅತಿಥಿಗಳು ಮತ್ತು ಸನ್ಮಾನಿತರನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಅಭಿನಂದಿಸಿದರು. ಈ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ತರಬೇತುದಾರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.