ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀದೇವರ ಪ್ರತಿಷ್ಠೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ಜ.31 ರಿಂದ ಆರಂಭಗೊಂಡಿದ್ದು, ಇಂದು ಶ್ರೀ ದೇವರ ಪ್ರತಿಷ್ಠೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು.


ಬೆಳಿಗ್ಗೆ 108 ತೆಂಗಿನ ಕಾಯಿಯ ಗಣಪತಿ ಹೋಮ, ಪ್ರತಿಷ್ಠಾಪಾಣಿ, 9.10ರಿಂದ 9.54ರ ಮೀನ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ದೇವರ ಪ್ರತಿಷ್ಠೆ, ಪ್ರತಿಷ್ಠಾ ಬಲಿ, ಅಂಕುರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.


ಊರ ಹಾಗೂ ಪರವೂರ ಭಕ್ತಾದಿಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ದೇವರ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಎಲ್ಲಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.