ಎಡಮಂಗಲ ದೇವಸ್ಥಾನದಲ್ಲಿ ಶಕ್ತಿಪೂಜೆ ಮತ್ತು ಶಿರಾಡಿ ರಾಜನ್ ದೈವ ಹಾಗೂ ಪರಿವಾರ ದೈವಗಳ ನೇಮ

0

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವದ ಪೂರ್ವಭಾವಿಯಾಗಿ ಫೆ.5ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಶಕ್ತಿಪೂಜೆ (ಅಮ್ಮನವರ ಪೂಜೆ )ನಡೆಯಿತು.


ಬೆಳಿಗ್ಗೆ ಮರೋಳಿಯಿಂದ ಶಿರಾಡಿ ರಾಜನ್ ದೈವದ ಭಂಡಾರ ಬಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಅಮ್ಮನವರ ಪೂಜೆ, ಶಿರಾಡಿ ರಾಜನ್ ದೈವ, ಗುಳಿಗ ದೈವ, ಕೊರಗಜ್ಜ ದೈವದ ನೇಮ ಹಾಗೂ ದೈವದ ಅಭಯದ ನುಡಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಪೂಜಾ ಕಾರ್ಯದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರು,ಕೂಡುಕಟ್ಟಿನವರು,ಊರ ಭಕ್ತಾಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here