ತಂಟೆಪ್ಪಾಡಿ ನಿನಾದದಲ್ಲಿ ಸಾಂಸ್ಕೃತಿಕ ಸೌರಭ, ನಾಟಕ, ಗೌರವಾರ್ಪಣೆ

0

ವಸಂತ ಶೆಟ್ಟಿ ಬೆಳ್ಳಾರೆಯವರ ಮುಂದಾಳತ್ವ ಕಳಂಜ ಗ್ರಾಮದ ತಂಟೆಪ್ಪಾಡಿಯಲ್ಲಿರುವ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಾಟಕ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಫೆ. 5ರಂದು ಸಂಜೆ ನಡೆಯಿತು.

ನಿನಾದ ಸಾಂಸ್ಕೃತಿಕ ಕಲಾಕೇಂದ್ರದ ಕಲಾವಿದರಿಂದ ಹಾಡು ಮತ್ತು ನೃತ್ಯಗಳ ವೈವಿದ್ಯಮಯ ಕಾರ್ಯಕ್ರಮ ನಡೆಯಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ
ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಳಿಮೋಹನ್ ಚೂಂತಾರು ಮತ್ತು ಅನರ್ಘ್ಯ ಐಏಎಸ್ ಕಾಡೆಮಿ ನವದೆಹಲಿ ಮತ್ತು ಬೆಂಗಳೂರು ಇದರ ಸಂಸ್ಥಾಪಕರಾದ ಮನೋಜ್ ಮಡ್ತಿಲರಿಗೆ ಗೌರವಾರ್ಪಣೆ ನಡೆಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ನಿರ್ದೇಶಕ ಮುದ್ದುಕೃಷ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಕಲಾಕೇಂದ್ರದ ಅಧ್ಯಕ್ಷ ಐತ್ತಪ್ಪ ಶೆಟ್ಟಿ, ಉಪಾಧ್ಯಕ್ಷ ವಾಸಪ್ಪ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಸುಷ್ಮಾ ಸತೀಶ್ ಭಂಡಾರಿ ಸನ್ಮಾನಿತರ ಪರಿಚಯ ಮಾಡಿದರು.

ನಿನಾದ ಸಾಂಸ್ಕೃತಿಕ ಕಲಾಕೇಂದ್ರದ ಕಾರ್ಯದರ್ಶಿ ವಸಂತ ಶೆಟ್ಟಿ ಬೆಳ್ಳಾರೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

ವಿನಯ ಶೆಟ್ಟಿ, ಉಮೇಶ್ ಶೆಟ್ಟಿ, ಪ್ರಸಾದ್ ಸೇವಿತ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕೈವಲ್ಯ ಕಲಾಕೇಂದ್ರ ಬೆಂಗಳೂರು ಅಭಿನಯಿಸುವ ನಾಟಕ ಮಾಧವಿ ಮತ್ತು ನಡೆಯಲಿದೆ.