ಕೆ.ವಿ.ಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಸುಳ್ಯ
ವಿಶ್ವ ಕ್ಯಾನ್ಸರ್ ದಿನಾಚರಣೆ

0

ಕೆ.ವಿ.ಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ವತಿಯಿಂದ ಫೆ. 04ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ನಿರ್ದೇಶಕರು ಹಾಗು ಎ.ಓ.ಎಲ್.ಇ(R) ಅಧ್ಯಕ್ಷರಾದ ಡಾ| ಕೆ.ವಿ. ಚಿದಾನಂದ, ಅಕಾಡೆಮಿ ಉಪಾಧ್ಯಕ್ಷರಾದ ಶ್ರೀಮತಿ ಶೋಭಾಚಿದಾನಂದ, ಆಸ್ಪತ್ರೆಯ ಡೀನ್ ಡಾ| ನೀಲಾಂಬಿಕೈ ನಟರಾಜನ್, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಹಾಗು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ| ಲೀಲಾಧರ್ ಡಿ. ವಿ. ಹಾಗು ನರ್ಸಿಂಗ್ ಮತ್ತು ಬಿಪಿಟಿ ಕಾಲೇಜಿನ ಪ್ರಾಂಶುಪಾಲರು ಚಿಕಿತ್ಸಾ ವಿಭಾಗದ ಮುಖ್ಯಸ್ಥರು, ಹಾಗು ತಾಲೂಕು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕ್ಯಾನ್ಸರ್ ರೋಗದ ದುಷ್ಪರಿಣಾಮಗಳು ಹಾಗು ಚಿಕಿತ್ಸೆಯ ಬಗ್ಗೆ ಡಾ| ಕೆ.ವಿ. ಚಿದಾನಂದ ಮಾಹಿತಿ ನೀಡಿದರು.
ಕೆ.ವಿ.ಜಿ ಮೆಡಿಕಲ್ ಕಾಲೇಜು, ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಾಗು ಶುಶ್ರುತ ವಿಭಾಗದ ವಿದ್ಯಾರ್ಥಿಗಳು ಜಾಥ ಮತ್ತು ಕಿರು ನಾಟಕದ ಮೂಲಕ ಜನ ಸಾಮಾನ್ಯರಲ್ಲಿ ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜಾಗೃತಿ ಹಾಗು ಅರಿವು ಮೂಡಿಸಿದರು.

LEAVE A REPLY

Please enter your comment!
Please enter your name here