ಕೋಲ್ಚಾರು ಶಾರದಾಂಬಾ ಭಜನಾ ಮಂದಿರದಲ್ಲಿ 43 ನೇ ವರ್ಷದ ಏಕಹಾ ಭಜನಾ ಕಾರ್ಯಕ್ರಮ

0

ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ವರ್ಷಂಪ್ರತಿ ಜರುಗುವ ವಾರ್ಷಿಕ ಏಕಹಾ ಭಜನೆಯು ಫೆ.5 ರಂದು ಜರುಗಿತು. ಪ್ರಾತ:ಕಾಲ ಸೂರ್ಯೋದಯಕ್ಕೆ ದೀಪ ಸ್ಥಾಪನೆಯಾಗಿ ಭಜನಾ ಸಂಕೀರ್ತನೆ ಪ್ರಾರಂಭಗೊಂಡಿತು. ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

ತಾಲೂಕಿನ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ ಅಹರ್ನಿಶಿ 24 ಗಂಟೆಗಳ ಕಾಲ ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿ ಮಹಾಪೂಜೆಯಾಗಿ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಯಿತು. ಮರುದಿನ ಪ್ರಾತ:ಕಾಲ ಸೂರ್ಯೋದಯಕ್ಕೆ ಮಹಾ ಮಂಗಳಾರತಿಯಾಗಿ ಭಜನಾ ಕಾರ್ಯಕ್ರಮ ಸಂಪನ್ನಗೊಂಡಿತು. ಭಜನಾ ಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರು,ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು ಸಹಕರಿಸಿದರು. ಸ್ಥಳೀಯ ಭಕ್ತಾದಿಗಳು ಆಗಮಿಸಿ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.