ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ : ವಿವಿಧ ಧಾರ್ಮಿಕ ಕಾರ್ಯಕ್ರಮ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ಜ.31 ರಿಂದ ಆರಂಭಗೊಂಡಿದ್ದು, ಇಂದು ದೇವಳದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು.


ಇಂದು ಬೆಳಿಗ್ಗೆ ಗಣಪತಿ ಹೋಮ, ಇಂದ್ರಾದಿ ದಿಕ್ಪಾಲ ಪ್ರತಿಷ್ಠೆ, ಸಪ್ತ ಮಾತೃಕಾ ಪ್ರತಿಷ್ಠೆ, ನಿರ್ಮಾಲ್ಯಧಾರಿ ಪ್ರತಿಷ್ಠೆ, ಅಂಕುರ ಪೂಜೆ, ಸೋಪಾನ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಸಂಜೆ ಅಂಕುರ ಪೂಜೆ, ಸೋಪಾನ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿರುವುದು.


ಊರ ಹಾಗೂ ಪರವೂರ ಭಕ್ತಾದಿಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ದೇವರ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಎಲ್ಲಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here