ಐದು ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಿದ್ದೀರಿ

0


ಮುಂದೆಯೂ ಎಲ್ಲರೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ


ಕೊನೆಯ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಎಸ್.ಅಂಗಾರ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕೆಡಿಪಿ ಸಭೆಯು ಸಚಿವ ಎಸ್.ಅಂಗಾರರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಈಗ ಬಂದಿರುವ ಅನುದಾನವನ್ನು ಮಾ.೧೫ರೊಳಗೆ ಕೆಲಸ ಮಾಡಿ ಮುಗಿಸಬೇಕು. ಅನುದಾನ ಲ್ಯಾಪ್ಸ್ ಆಗದಂತೆ ಅಧಿಕಾರಿಗಳೇ ನೋಡಿಕೊಳ್ಳಬೇಕು ಎಂದು ಹೇಳಿದರು. ಕಳೆದ ೫ ವರ್ಷದ ನನ್ನ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಹಕಾರ ನೀಡಿದ್ದೀರಿ. ಮುಂದೆಯೂ ಎಲ್ಲರೂ ಉತ್ತಮವಾಗಿ ಕೆಲಸ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.


೫ ವರ್ಷದಲ್ಲಿ ಕೊನೆಯ ಎರಡು ವರ್ಷ ಮಂತ್ರಿಯಾಗಿಯೂ ಕೆಲಸ ಮಾಡುವ ಅವಕಾಶ ಸಿಕ್ಕಿತು. ನನ್ನ ಶಾಸಕತ್ವದ ಅವಧಿಯಲ್ಲಿ ವೈಯಕ್ತಿಕವಾಗಿ ಯಾರ ಮೇಲೂ ಕೋಪ ಮಾಡಿದವನಲ್ಲ. ಕ್ಷೇತ್ರದ ಅಭಿವೃದ್ಧಿಯ ನಿಟ್ಟಿನಲ್ಲಿ ಕೆಲವು ಮಾತುಗಳನ್ನು ಹೇಳಿzನೆ ಅಷ್ಟೆ. ಘಟ್ಟದ ಮೇಲೆ ಶಾಸಕರು ಬೈಯ್ಯುವಂತೆ ನಾವು ಬೈದಿಲ್ಲ ಎಂದು ಅಧಿಕಾರಿಗಳ ಸಹಕಾರ ನೆನಪಿಸಿಕೊಂಡು ಕೃತಜ್ಞತೆ ಸಲ್ಲಿಸಿದರು.
ಅಧಿಕಾರ ಸಿಗುವುದು ಮುಖ್ಯವಲ್ಲ. ಸಿಕ್ಕಿದಾಗ ಸಾಧನೆ ಮಾಡಬೇಕು. ಆ ನಿಟ್ಟಿನಲ್ಲಿ ಸುಳ್ಯ ಕ್ಷೇತ್ರದ ಎಲ್ಲಾ ಅಧಿಕಾರಿಗಳು ಇನ್ನೂ ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕೆಂದು ಕೇಳಿಕೊಂಡರು.

ಜಿಲ್ಳಾ ಪಂಚಾಯತ್, ನಿರ್ಮಿತಿ ಕೇಂದ್ರ, ಪಿಡಬ್ಲ್ಯೂಡಿ, ಕೆಆರ್‌ಡಿಎಲ್ ನವರು ಅನುದಾನಗಳು ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿದರು.
ಇ.ಒ. ಭವಾನಿಶಂಕರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here