ಸುಳ್ಯ : ನಿವೃತ್ತ ಉಪನಿರ್ದೇಶಕ ಬಾಲಸುಬ್ರಹ್ಮಣ್ಯ ಕೆ. ಎಸ್ ರಿಗೆ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭ

0

ಜನವರಿ 31 ರಂದು ನಿವೃತ್ತರಾದ ಮಂಗಳೂರು ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕ ಬಾಲಸುಬ್ರಹ್ಮಣ್ಯ ಕೆ. ಎಸ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಕಾರ್ಯಕ್ರಮ ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಹಾಗೂ ಸುಳ್ಯ ತಾಲೂಕು ಪ್ಯಾಕ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಂಘದ ವತಿಯಿಂದ ಫೆ.6 ರಂದು ‌ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.
ಸುಳ್ಯ ತಾಲೂಕು ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ಸಂಘ ಸಂಘಗಳ ಸಹಾಯಕ ನಿಬಂಧಕಿ ಶ್ರೀಮತಿ ತ್ರಿವೇಣಿ ರಾವ್, ಸುಳ್ಯ ಸಿ.ಎ ಬ್ಯಾಂಕ್ ಅಧ್ಯಕ್ಷ ಬಾಲಗೋಪಾಲ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಪೂವಪ್ಪ ಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಸಂಘದ ಅಧ್ಯಕ್ಷ ನೇಮಿರಾಜ ಪಲ್ಲೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು .

ಸಮಾರಂಭದಲ್ಲಿ ಯೂನಿಯನ್ ನ ವತಿಯಿಂದ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಂಘದ ವತಿಯಿಂದ ಬಾಲಸುಬ್ರಮಣ್ಯ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಬಾಲಸುಬ್ರಹ್ಮಣ್ಯರವರು ಮಾತನಾಡಿ
“ಸಹಕಾರ ಸಂಸ್ಥೆಗಳು ಗ್ರಾಮೀಣ ಪ್ರದೇಶದ ದೇವಸ್ಥಾನಗಳು ಇದ್ದಂತೆ. ಒತ್ತಡಗಳನ್ನು ನಿವಾರಿಸಿ ಪರಸ್ಪರ ಸಹಕಾರದಿಂದ ದುಡಿದರೆ ಉನ್ನತಿಯಾಗುವುದು “ಎಂದು ಹೇಳಿದರು. ಸಭಾಧ್ಯಕ್ಷತೆ ವಹಿಸಿದ ರಮೇಶ್ ದೇಲಂಪಾಡಿ ಯವರು ಮಾತನಾಡಿ “ಬಾಲಸುಬ್ರಹ್ಮಣ್ಯರ ಮಾತುಗಳು ಸ್ವೀಕರಿಸುವುದು ಉತ್ತಮವಾಗಿದೆ” ಎಂದು ಶ್ಲಾಘಿಸಿದರು. ಶ್ರೀಮತಿ ತ್ರಿವೇಣಿ ರಾವ್ ರವರು ನಿವೃತ್ತರಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನೇಮಿರಾಜ ಪಲ್ಲೋಡಿ ಪ್ರಸ್ತಾವನೆಗೈದರು. ಚಿದಾನಂದ ಸ್ವಾಗತಿಸಿದರು. ಲೋಹಿತ್ ವಂದಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ ಶೆಟ್ಟಿ ನಿರೂಪಿಸಿದರು.