ಪಿ.ಬಿ.ಹರೀಶ್ ರೈಯವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

0

ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ , ಕುಕ್ಕೆ ಸುಬ್ರಹ್ಮಣ್ಯದ ಪಿ.ಬಿ.ಹರೀಶ್ ರೈ (ಪಿ.ಬಿ.ಹರಿಪ್ರಸಾದ್ ರೈ ) ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ (2020ನೇ ಸಾಲಿನ) ಆಯ್ಕೆಯಾಗಿದ್ದಾರೆ.

ಮಾಧ್ಯಮ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಕಳೆದ 4 ವರ್ಷಗಳ ಪ್ರಶಸ್ತಿಯನ್ನು ಗುರುವಾರ ಅಕಾಡೆಮಿ ಘೋಷಿಸಿದೆ. ಪಿ.ಬಿ.ಹರೀಶ್ ರೈ ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದು , ಪ್ರಸ್ತುತ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಹಾಗೂ ಮಂಗಳೂರು ಪ್ರೆಸ್ ಕ್ಲಬ್‌ನ ಉಪಾಧ್ಯಕ್ಷರಾಗಿದ್ದಾರೆ.