ಜಟ್ಟಿಪಳ್ಳ : ನಗರ ಪಂಚಾಯತ್ ವತಿಯಿಂದ ಟ್ಯಾಂಕರ್ ನಲ್ಲಿ ಕುಡಿಯುವ ನೀರು ವಿತರಣೆ

0

ಸುಳ್ಯ ಜಟ್ಟಿಪಳ್ಳ ಪರಿಸರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದು ಸ್ಥಳೀಯ ನಿವಾಸಿಗಳು ಇಂದು ನಗರ ಪಂಚಾಯತಿ ಮುಂಭಾಗ ಧರಣಿ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.


ಇದಕ್ಕೆ ಉತ್ತರಿಸಿದ ನಗರ ಪಂಚಾಯತ್ ಅಧ್ಯಕ್ಷರು ಸದ್ಯದ ಮಟ್ಟಿಗೆ ಟ್ಯಾಂಕರ್ ಮೂಲಕ ನೀರು ಇಲ್ಲದ ಪ್ರದೇಶಕ್ಕೆ ನೀರಿನ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದ್ದರು.
ಅದರಂತೆ ಅವರು ನಗರ ಪಂಚಾಯತ್ ಸಿಬ್ಬಂದಿಗಳ ಸಹಕಾರದಿಂದ ಜಟ್ಟಿಪಳ್ಳ ಪರಿಸರಕ್ಕೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.