ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮ

0

ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಆಶ್ರಯದಲ್ಲಿ ಹದಿಹರೆಯದ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯಲ್ಲಿ ಫೆ. 13 ರಂದು ನಡೆಯಿತು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಲೀಲಾವತಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ ಸ್ವಾಗತಿಸಿ, ಸಹ ಶಿಕ್ಷಕಿ ಚೇತನ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.